Take a fresh look at your lifestyle.

5 ಕಾರ್ಮಿಕರ ಸಾವು !

ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್‌ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 15 ಕಾರ್ಮಿಕರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

0
post ad

ಶಿವಮೊಗ್ಗ: ಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್‌, ಜಿಲೆಟಿನ್ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 5 ಕಾರ್ಮಿಕರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಹಲವರು ಗಾಯಗೊಂಡಿದ್ದಾರೆ.

ರಾತ್ರಿ 10.30 ಕ್ಕೆ ಈ ಘಟನೆ ನಡೆದಿದ್ದು, ಜಿಲ್ಲೆಯಾದ್ಯಂತ ಭೂಕಂಪನದ ಅನುಭವ ಆಗಿದ್ದು, ಜನರು ಭಯಬೀತರಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಯವರು ಸಂತಾಪ ಸೂಚಿಸಿದ್ದರೆ, ಮುಖ್ಯಮಂತ್ರಿ ಯಡಿಯೂರಪ್ಪ ಸಹ ಮೃತ ಕಾರ್ಮಿಕರಿಗೆ ಸಂತಾಪ ಸೂಚಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ, ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್‌ ಬಾಕ್ಸ್‌ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳೀಯ ಮನೆಗಳಿಗೂ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ.
ಅಕ್ರಮ ಕಲ್ಲುಗಾರಿಕೆಯ ಆರೋಪ ಕೇಳಿ ಬಂದಿದ್ದು, ಕ್ರಷರ್ ನ ಮಾಲೀಕನನ್ನು ಬಂಧಿಸಲಾಗಿದೆ.
ಭೂಕಂಪನದ ಸಮಯದಲ್ಲೇ ಈ ಘಟನೆ ನಡೆದಿದೆ. ಭೂಮಿ ಕಂಪಿಸಿದಾಗ ಘರ್ಷಣೆಯಿಂದ ಸ್ಫೊಟವಾಗಿರಬಹುದು ಎಂದು
ಕೆಲವರು ಹೇಳಿದರೆ, ಸ್ಪೋಟದಿಂದಲೇ ಭೂಕಂಪನದ
ಅನುಭವವಾಗಿದೆ ಎಂದು ಹಲವರು ಅನಿಸಿಕೆ ವ್ಯಕ್ತಪಡಿಸಿದರು.