Take a fresh look at your lifestyle.

ಜಿಲೆಟಿನ್ ಸ್ಫೋಟಗೊಂಡು 6 ಕಾರ್ಮಿಕರ ಸಾವು

ನಿನ್ನ ಸಂಜೆಯೇ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಜಿಲೆಟಿನ್ ಕಡ್ಡಿಗಳನ್ನು ಪೊಲೀಸರ ಕಣ್ಣಿಗೆ ಬೀಳದಂತೆ ದೂರ ಸಂಗ್ರಹ ಮಾಡಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ

0
post ad

ಚಿಕ್ಕಬಳ್ಳಾಪುರ : ಕ್ರಷರ್ ಬಳಿ ಜಿಲೆಟಿನ್ ಸ್ಫೋಟಗೊಂಡು 6 ಕಾರ್ಮಿಕರು ಸಾವನ್ನಪ್ಪಿರುವ ಬೀಕರ ದುರಂತ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ರಾತ್ರಿ 12.45 ರಲ್ಲಿ ನಡೆದ ಈ ಘಟನೆಯಲ್ಲಿ ಸ್ಥಳೀಯರು ಮತ್ತು ಹೊರರಾಜ್ಯಗಳ ಕಾರ್ಮಿಕರು ದುರ್ಮರಣ ಹೊಂದಿದ್ದಾರೆ.
ಜಿಲೆಟಿನ್ ಸ್ಪೋಟಕ್ಕೆ ಕಾರಣ ಎನು ಇನ್ನು ತಿಳಿದುಬಂದಿಲ್ಲವಾದರೂ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಥಳದಲ್ಲಿ ಈ ದುರ್ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲ್ಲೂಕು ಪೆರೇಸಂದ್ರದ ಪಕ್ಕದ ಹಿರೇನಾಗವಲ್ಲಿ ಗ್ರಾಮದಲ್ಲಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆ ಕ್ವಾರಿಯ ಸಂಬಂಧ ಕ್ರಷರ್ ನಿಂದ ಒಂದು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.
ಶಿವಮೊಗ್ಗದ ಹುಣಸೋಡುನಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದು ಹೋಗಿದೆ.
ಕ್ರಷರ್ ಗಳ ಮೇಲೆ ಕಟ್ಟುನಿಟ್ಟಾದ ಕ್ರಮ ಜರಿಗಿಸುವಂತೆ ಸಿಎಂ ಆದೇಶದ ನಂತರವೂ ನಡೆದ ಈ ಘಟನೆ ಸಂಬಂಧ ಸ್ಪೋಟಕಗಳನ್ನು ಸರಬರಾಜು ಮಾಡುತಿದ್ದ
ಗಂಗೊಜೀ ರಾವ್ ಎಂಬಾತನನ್ನು ಬಂಧಿಸಲಾಗಿದೆ.
ಮಂಚೇನಹಳ್ಳಿಯಲ್ಲಿ ಸ್ಪೋಟಕಗಳ ತಯಾರು ಮಾಡುತಿದ್ದ ಎನ್ನಲಾಗಿದೆ.
ಸ್ಪೋಟದ ಸ್ಥಳಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಲ್ಲಾ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ಮತ್ತು ಜಿಲ್ಲಾಧಿಕಾರಿ ಲತಾ ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿ ಹಿರೇನಾಗವಲ್ಲಿ ಬಳಿಯ ರಾಘವೇಂದ್ರರೆಡ್ಡಿ, ಶಿವಾರೆಡ್ಡಿ, ನಾಗರಾಜ್ ಮಾಲೀಕತ್ವದ ಬ್ರಹ್ಮವಾಸಿನಿ ಎಂ ಸ್ಯಾಂಡ್ ಪ್ರೈವೇಟ್ ಲಿಮಿಟೆಡ್ ಕ್ರಷರ್ ನ ಅಕ್ರಮ ಜಿಲೆಟಿನ್ ದಾಸ್ತಾನುವನ್ನು ಕಳೆದ 7 ರಂದು ಸೀಜ್ ಮಾಡಲಾಗಿತ್ತು. ನಿನ್ನ ಸಂಜೆಯೇ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಜಿಲೆಟಿನ್ ಕಡ್ಡಿಗಳನ್ನು ಪೊಲೀಸರ ಕಣ್ಣಿಗೆ ಬೀಳದಂತೆ ದೂರ ಸಂಗ್ರಹ ಮಾಡಲು ತೆರಳಿದ್ದ ವೇಳೆ ಈ ಘಟನೆ ನಡೆದು ಹೋಗಿದೆ.
ಇದು ಅತ್ಯಂತ ವಿಷಾದಕರ ಘಟನೆಯಾಗಿದ್ದು, ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಘಟನಾ ಸ್ಥಳದಿಂದಲೇ ದೂರವಾಣಿ ಮೂಲಕ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರ ಪ್ರತಿಕ್ರಿಯೆ ನೀಡಿದ್ದಾರೆ.