Take a fresh look at your lifestyle.

ಬೇಡಿಕೆ ಈಡೇರಿಕೆ, ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಅಂಗನವಾಡಿ ನೌಕರರ ಪ್ರತಿಭಟನೆ

ಬೇಡಿಕೆ ಈಡೇರಿಕೆ, ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಅಂಗನವಾಡಿ ನೌಕರರ ಪ್ರತಿಭಟನೆ

0
post ad

ನರಗುಂದ: ರಾಜ್ಯ ಮತು ಕೇಂದ್ರ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ, ಅಂಗನವಾಡಿ ನೌಕರರ ಬೇಡಿಕೆ ಈಡೇರಿಸದೆ ವಿಳಂಬ ಮಾಡುತ್ತಿವುದನ್ನು ಖಂಡಿಸಿ ಅಂಗನವಾಡಿ ನೌಕರರ ಸಂಘ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

   ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾನೂನನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ  ಅಂಗನವಾಡಿ ನೌಕರರು ನರಗುಂದದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಲಕ್ಷ್ಮಿ ಗಾಯಕವಾಡ ಸರ್ಕಾರಗಳಿಂದ ಕಾರ್ಮಿಕರು ಸಂಪೂರ್ಣ ನಿರ್ಲಕ್ಷಕ್ಕೆ ಒಳಗಾಗಿದ್ದಾರೆ ಎಂದರು.

ಕೇಂದ್ರ ಸರ್ಕಾರ ಕಾರ್ಮಿಕ, ರೈತರ ಪರವಾಗಿ ಇಲ್ಲ. ರೈತ ವಿರೋಧಿ ಕೃಷಿ ಕಾಯ್ದೆ, ವಿದ್ಯುತ್ ಮಸೂದೆ ಸೇರಿದಂತೆ ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿ ಮಾಡಲಾಗಿದೆ. ಇದರಿಂದಾಗಿ ಜನ ಸಾಮಾನ್ಯರ, ಕಾರ್ಮಿಕರ ಬದುಕು ಬೀದಿಗೆ ಬರುವಂತಾಗಿದೆ. ನೂತನ ಶಿಕ್ಷಣ ನೀತಿ (ಎಸ್.ಇ.ಪಿ) ರದ್ದುಪಡಿಸಬೇಕು, ಎಲ್ಲಾ ರೀತಿಯ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು, ಆದಾಯ ತೆರಿಗೆಯ ಮಿತಿಯಿಂದ ಹೊರಗಿರುವ ಎಲ್ಲಾ ಕುಟುಂಬಗಳಿಗೂ ಮಾಸಿಕ ₹7,500 ನಗದು ಹಣ ವರ್ಗಾವಣೆ ಮಾಡಬೇಕು, ಬಡವರಿಗೆ ಪ್ರತಿ ತಿಂಗಳ 10 ಕೆಜಿ ಆಹಾರ ಧಾನ್ಯ ಉಚಿತವಾಗಿ ನೀಡಬೇಕು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಾರ್ಷಿಕ 200 ದಿನಗಳ ಕೆಲಸ ಮತ್ತು ದಿನಕ್ಕೆ ₹700 ವೇತನ ನೀಡಬೇಕು. ನಗರ ಪ್ರದೇಶಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು, ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣೆ ವ್ಯವಸ್ಥೆಯನ್ನು ಪುನಃ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

  ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ತಾಲ್ಲೂಕು ಘಟಕದ ಅಧ್ಯಕ್ಷೆ ಗಿರಿಜಾ ಮರ್ಚಕನ್ನವರ, ಪ್ರಧಾನ ಕಾರ್ಯದರ್ಶಿ ಎಸ್.ಬಿ.ರೋಣದ, ಬೇಬಿ ದೊಡಮನಿ, ದಾದೀಮಾ ನದಾಫ್, ಸುನಂದಾ ಬಂದೋಜಿ, ಶಂಕ್ರಮ್ಮ ಸುಳ್ಳಿಕೇರಿ, ತುಳಸವ್ವ ಬಂದೋಜಿ, ದೇವಕ್ಕೆ ಮಾಮನಿ, ನೀಲಗಂಗಾ ಮಾದರ, ಶಾರದಾ ಹಳೇಮನಿ, ಬಸಮ್ಮ ಕೊಡ್ಲಿವಾಡ, ಬಸಮ್ಮ ಗುಡಿಕಾರ, ಸಾವಿತ್ರಿ ಪಾಟೀಲ, ರೇಣುಕಾ ಮಟಗೇರ ಇದ್ದರು.