Take a fresh look at your lifestyle.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು 09 ಸೆಪ್ಟೆಂಬರ್ 2020ರ ಸಂಜೆ 5-30 ಗಂಟೆಯೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

post ad

ಹಾವೇರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳ ನೇಮಕವನ್ನು ಆರಂಭಿಸಿದೆ. ಆಯಾ ಜಿಲ್ಲೆಗಳ ಉಪ ನಿರ್ದೇಶಕರು ನೇಮಕ ಪ್ರಕ್ರಿಯೆಯ ಅಧಿಸೂಚನೆಯನ್ನು ಹೊರಡಿಸುತ್ತಾರೆ.ಅದರಂತೆ  ಹಾವೇರಿ ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿನ ಗ್ರಾಮಗಳ/ನಗರ ಪ್ರದೇಶಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿಯಾಗಿ ಗೌರವ ಸೇವೆ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಅಂದರೆ ಅದೇ ಗ್ರಾಮದ ಅದೇ ಕಂದಾಯ ವಾರ್ಡಿನ ಮಹಿಳಾ ಅಭ್ಯರ್ಥಿಗಳು  ಅರ್ಜಿಯನ್ನ ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆಯಾಗಲು ಎಸ್‌.ಎಸ್‌.ಎಲ್‌.ಸಿ. ತೇರ್ಗಡೆ ಆಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು ಗರಿಷ್ಠ ವಿದ್ಯಾರ್ಹತೆ 9ನೇ ತರಗತಿ ತೇರ್ಗಡೆ ಹೊಂದಿರಬೇಕು. ಕೆಳಗಿನ ಎಲ್ಲ ದಾಖಲೆಗಳೊಂದಿಗೆ ಅರ್ಭ್ಯರ್ಥಿಗಳು  ದಿನಾಂಕ 0 ಸೆಪ್ಟೆಂಬರ್ 09ರ ಸಂಜೆ 5-30 ಗಂಟೆಯೊಳಗೆ ಆನಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:

* ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನಲೈನ್‌)
* ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕ ಇರುವ ಎಸ್‌.ಎಸ್‌.ಎಲ್‌.ಸಿ. ಅಂಕಪಟ್ಟಿ.
* ಕಡ್ಡಾಯವಾಗಿ ತಹಶೀಲದಾರರು/ ಉಪತಹಶೀಲದಾರರಿಂದ ಪಡೆದ ಒಂದು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
ಲಗತ್ತಿಸುವುದು, ಬೇರೆ ರಹವಾಸಿ ಪ್ರಮಾಣ ಪತ್ರ ಲಗತ್ತಿಸಿದಲ್ಲಿ ಪರಿಗಣಿಸಲಾಗುವುದಿಲ್ಲ.
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ (ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿಗಿಂತ ಹೆಚ್ಚಿನ ವಿದ್ಯಾ ರ್ಹತೆ ಹೊಂದಿರುವವರು 10ನೇ ತರಗತಿಯ ಅಂಕಪಟ್ಟಿಯನ್ನು ಲಗತ್ತಿಸುವುದು) ಎಸ್‌.ಎಸ್‌.ಎಲ್‌.ಸಿ. ಅಂಕಗಳ ಪಡೆದ ಜನ್ಯ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
* ಅಂಗನವಾಡಿ ಸಹಾಯಕಿ ಹುದ್ದೆಗೆ ಆಯ್ಕೆ ಬಯಸುವ ಅಭ್ಯರ್ಥಿಗಳು 4 ರಿಂದ 9ನೇ ಇಯತ್ತೆಯವರೆಗಿನ ಅಂಕ ಪಟ್ಟಿಗಳನ್ನು ಮಾತ್ರವೇ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ಮತ್ತು ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ.
* ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ, (ತಹಶೀದಾರರು ನೀಡಿದ್ದು)
* ವಿಧವಾ ಅಭ್ಯರ್ಥಿಗಳು ಕಡ್ಡಾಯವಾಗಿ ಪತಿಯ ಮರಣ ಪ್ರಮಾಣ ಪತ್ರ ಲಗತ್ತಿಸುವುದು. ( ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ)
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪ ವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
* ಅಂಗವಿಕಲತೆ ಪ್ರಮಾಣ ಪತ್ರವನ್ನು ಪರಿಗಣಿಸಲಾಗುವುದು. (ದೈಹಿಕ ಅಂಗವಿಕಲತೆ ಶೇ. 60ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಅದು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಮಾತ್ರ. ಇದಕ್ಕೆ ಅಂಗವಿಕಲರ ‘ಮಾಶಾಸನದ ದೃಢೀಕರಣವನ್ನು ಪರಿಗಣಿಸುವುದಿಲ್ಲ.
* ಅಂಗನವಾಡಿ ಕಾರ್ಯಕರ್ತೆ ನೇಮಕಾತಿಯಲ್ಲಿ ವಿಕಲಚೇತನರಿಗೆ 10ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಿದೆ.
* ವಿಚ್ಛೇಧನ ಹೊಂದಿರುವ ಮಹಿಳೆಯರು ನ್ಯಾಯಾಲಯದಿಂದ ಪಡೆದ ವಿಚ್ಛೇಧನ ಪ್ಮತಪತ್ರವನ್ನು ಲಗತ್ತಿಸುವುದು.
* ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಲಗತ್ತಿಸುವುದು.
* ಪರತ್ಯಕ್ತೆ ಮಹಿಳೆಯರು ಗ್ರಾಮ ಪಂಚಾಯತನಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸುವುದು.
* ಇಲಾಖೆಯ ಸುಧಾರಣಾ ಸಂಸ್ಥೆ/ರಾಜ್ಯ ಮಹಿಳಾ ನಿಲಯಗಳ ನಿವಾಸಿ ಎಂಬ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
* ಯೋಜನಾ ನಿರಾಶ್ರಿತರೆಂಬ ಬಗ್ಗೆ ತಹಶೀಲದಾರರಿ೦ದ ಪಡೆದ ಪ್ರಮಾಣ ಪತ್ರ.
* ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಾಗಿದ್ದಲ್ಲಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗೆ ಆಯ್ಕೆಯಾದಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಿರುತ್ತದೆ.
* ನಗರ ಪ್ರದೇಶದಲ್ಲಿನ ಅಂಗನವಾಡಿಗಳಿಗೆ ಅರ್ಜಿ ಸಲ್ಲಿಸಿ ಬಯಸುವವರು ಅದೇ ಕಂದಾಯ ವಾರ್ಡಿನ ನಿವಾಸಿಗಳಾಗಿರಬೇಕು, ಬೇರೆ ವಾರ್ಡಿನ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಇದಕ್ಕೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರವನ್ನು ತಪ್ಪದೇ ಲಗತ್ತಿಸಬೇಕು.

ನೇಮಕಾತಿ ಪ್ರಕ್ರಿಯೆ ಈ ರೀತಿ ಇರುತ್ತದೆ