Take a fresh look at your lifestyle.

ಪ್ರತಿಭಟಿಸಲು ಹೊರಟಿದ್ದ ಆಶಾ ಕಾರ್ಯಕರ್ತೆಯರ ಬಂಧನ

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಲು ಹೊರಟಿದ್ದ ಕಾರ್ಯಕರ್ತೆಯರನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ

0
post ad

ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟಿಸಲು ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ತುಮಕೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಸರ್ಕಾರ ನೀಡಿದ ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಸಂಬಳ 12,000 ರೂ. ಕೂಡಲೇ ಘೋಷಣೆ ಮಾಡಬೇಕು ಮತ್ತು ಎರಡು ವರ್ಷದಿಂದ ಬಾಕಿ ಇರುವ ಪ್ರೋತ್ಸಾಹಧನವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು. ಈ ಧರಣಿಗೆ ತುಮಕೂರಿನಿಂದ ಸಾಥ್ ನೀಡಲು ರಾಜಧಾನಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಬಂಧಿಸಿ, ಚಿಲುಮೆ ಭವನದಲ್ಲಿ ಇರಿಸಿರುವುದನ್ನು ಖಂಡಿಸಿದ ಆಶಾ ಕಾರ್ಯಕರ್ತೆಯರು, ಪೊಲೀಸರ ವಿರುದ್ಧ ಚಿಲುಮೆ ಭವನದಲ್ಲಿ ಪ್ರತಿಭಟನೆ ನಡೆಸಿದರು.
ವರದಿ,
ರವಿ ಚಿಂಪುಗಾನಹಳ್ಳಿ
ತುಮಕೂರು ವರದಿಗಾರ