Take a fresh look at your lifestyle.

ಬಿಇಎಂಎಲ್ ಕಾರ್ಮಿಕರಿಂದ ಪ್ರತಿಭಟನೆ

ಬಿಇಎಂಎಲ್ ಬೆಂಗಳೂರು ಕಾಂಪ್ಲೆಕ್ಸ್ ನ ಕಾರ್ಮಿಕ ಸಂಘದ ಪದಾಧಿಕಾರಿಗಳು, ಕಾರ್ಮಿಕರು 'ಬೆಮೆಲ್ ಉಳಿಸಿ' ಘೋಷಣೆಗಳ್ನು ಕೂಗಿ, ಖಾಸಗೀಕರಣ ನಿಲ್ಲಿಸುವಂತೆ ಒತ್ತಾಯಿಸಿದರು

0
post ad

ಬೆಂಗಳೂರು : ಬಿಇಎಂಎಲ್ ಸಂಸ್ಥೆಯಿಂದ ಬಂಡವಾಳ ಹಿಂತೆಗೆತ ಆರಂಭಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ಕಾಂಪ್ಲೆಕ್ಸ್ ನ ಮುಖ್ಯದ್ವಾರದಲ್ಲಿ ಇಂದು ಕಾರ್ಮಿಕರು ಪ್ರತಿಭಟನೆಯನ್ನು ನಡೆಸಿದರು.


ಕಾರ್ಮಿಕ ಸಂಘ ಕರೆ ನೀಡಿರುವ ನಿರಂತರ ಪ್ರತಿಭಟನೆಯ ಭಾಗವಾಗಿ ಕಾರ್ಮಿಕರು ತಮ್ಮ ಪಾಳಿಗೂ ಮುನ್ನವೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೆಳಗ್ಗೆ ಏಳು ಗಂಟೆಗೆ ಆರಂಭವಾಗಿದ್ದ ಪ್ರತಿಭಟನೆಯು ಎಂಟು ಗಂಟೆಯವರೆಗೂ ನಡೆಯಿತು.
ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ಯಮ ವಿರೋಧಿ ನೀತಿಗಳು, ಖಾಸಗೀಕರಣ, ಬಹುರಾಷ್ಟ್ರೀಯ ಕಂಪೆನಿಗಳಿಗೆ ಕನಿಷ್ಠ ಬೆಲೆಗೆ ಭೂಮಿಗಳ ಮಾರಾಟ ಮತ್ತು ಬಂಡವಾಳ ಹಿಂತೆಗೆತ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಬಿಇಎಂಎಲ್ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಮೆಲ್ ಕಾರ್ಮಿಕ ಸಂಘದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸ ರೆಡ್ಡಿ, ಕಾರ್ಯದರ್ಶಿ ಮಹೇಶ್ ಸೇರಿದಂತೆ ಪದಾಧಿಕಾರಿಗಳು ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕಾರ್ಮಿಕರು ಕೂಗಿದರು, ಜೊತೆಗೆ ಖಾಸಗೀಕರಣ ಪ್ರಕ್ರಿಯೆಯನ್ನು ತಕ್ಷಣಕ್ಕೆ ನಿಲ್ಲಿಸುವಂತೆ ಒತ್ತಾಯಿಸಿದರು.
ಕೇಂದ್ರ ಸರ್ಕಾರವು ಬೃಹತ್ ರಕ್ಷಣಾ ವಲಯದ ಉದ್ಯಮವಾದ ಬೆಮೆಲ್ ನ ತನ್ನ ಶೇಕಡ 54.03 ಷೇರಿನಲ್ಲಿ ಶೇಕಡ 26 ರಷ್ಟು ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಬಿಡ್ ಅನ್ನು ಕರೆದಿದ್ದು ಈಗಾಗಲೇ ಖಾಸಗೀಕರಣದ ಪ್ರಕ್ರಿಯೆ ಆರಂಭವಾಗಿದೆ. ಇದರಿಂದ ಸಂಸ್ಥೆಯ ಸುಮಾರು 8500 ಖಾಯಂ ಉದ್ಯೋಗಿಗಳು ಹಾಗೂ ಸುಮಾರು 4500 ಗುತ್ತಿಗೆ ಕಾರ್ಮಿಕರಿಗೆ ಭವಿಷ್ಯದಲ್ಲಿ ಕೆಲಸದ ಅಭದ್ರತೆ ತಲೆದೋರುವುದರಿಂದ ಹಾಗೂ ಈ ದೇಶದ ಸಂಪತ್ತನ್ನು ಬಹಳ ಕಡಿಮೆ ಮೊತ್ತಕ್ಕೆ ಖಾಸಗಿಯವರ ಪಾಲಾಗುವುದನ್ನು ಸಂಸ್ಥೆಯ ಒಂಬತ್ತು ಘಟಕಗಳ ಉದ್ಯೋಗಿಗಳು ಮತ್ತು ಕಾರ್ಮಿಕ ಸಂಘಟನೆಗಳು ವಿರೋಧಿಸಿ ಹೋರಾಟವನ್ನು ಮಾಡುತ್ತಿದ್ದಾರೆ.