Take a fresh look at your lifestyle.

ಬಾಲಕಾರ್ಮಿಕರ ಸಮೀಕ್ಷೆ ಕಾರ್ಯ ಆರಂಭ

ಮಕ್ಕಳನ್ನು ಬಾಲಕಾರ್ಮಿಕತೆಯಿಂದ ಮುಕ್ತವಾಗಿಸಲು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ವತಿಯಿಂದ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ

0
post ad

ಬಳ್ಳಾರಿ : ಜಿಲ್ಲೆಯಾದ್ಯಂತ ಸೋಮವಾರದಿಂದ ಒಂದು ವಾರದ ಕಾಲ ಬಾಲಕಾರ್ಮಿಕರ ಸಮೀಕ್ಷೆ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಸಿರುಗುಪ್ಪ ತಾಲೂಕಿನಲ್ಲಿ ಸೋಮವಾರದಿಂದ ಆರಂಭವಾಗಿರುವ ಬಾಲಕಾರ್ಮಿಕರ ಸಮೀಕ್ಷೆಯು ಕಾರ್ಮಿಕ ಅಧಿಕಾರಿಗಳ ಪರಿವೀಕ್ಷಣೆಯಲ್ಲಿ ನಡೆಯಿತು.
ಕಾರ್ಮಿಕ ಅಧಿಕಾರಿಗಳು ಸಮೀಕ್ಷೆ ನಡೆಸುವ ಸ್ವಯಂಸೇವಾ ಸಂಸ್ಥೆಗಳೊಂದಿಗೆ ಮೇಲ್ವಿಚಾರಣೆ ಕಾರ್ಯದಲ್ಲಿ ಭಾಗವಹಿಸಿದ್ದರು.

  ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಆದರೂ ಹಲವೆಡೆಗಳಲ್ಲಿ ಬಾಲಕರನ್ನು ಕೆಲಸಕ್ಕೆ ನೇಮಿಸಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ ರಾಜ್ಯಾದ್ಯಂತ ಅನಿರೀಕ್ಷಿತ ದಾಳಿಗಳನ್ನು ನಡೆಸಿ ಪರಿಶೀಲನೆಯನ್ನು  ನಡೆಸಿದ್ದಾರೆ. 

*15ರಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.

* ಕಾಯ್ದೆ ಉಲ್ಲಂಘಿಸಿದ ಮಾಲಕರಿಗೆ 50,000 ರೂ.ವರೆಗೆ ದಂಡ ಹಾಗೂ ಎರಡು ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು.

* ತಪ್ಪಿಸ್ಥ ಮಾಲೀಕರ ವಿರುದ್ಧ ಎಫ್‌ಐಆರ್ ಸಹ ದಾಖಲಿಸಲಾಗುವುದು.,

ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆಯ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಸ್ಟಿಕ್ಕರ್ ಮತ್ತು ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

ವಾಯ್ಸ್ ಆಫ್ ವರ್ಕರ್ಸ್’ ಸಹ ಬಾಲಕಾರ್ಮಿಕ ವಿರೋಧಿ ಪದ್ದತಿಗೆ ಬೆಂಬಲ ನೀಡಿದ್ದು, ಯಾರಾದರೂ ಬಾಲ ಕಾರ್ಮಿಕರು ದುಡಿಮೆಯಲ್ಲಿ ಒಳಪಟ್ಟಿದ್ದರೆ ನಮಗೆ ತಿಳಿಸಿ, ನಾವು ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತರುತ್ತೇವೆ.