Take a fresh look at your lifestyle.

ಮುಷ್ಕರ ನಿಲ್ಲಿಸಿ, ಕರ್ತವ್ಯಕ್ಕೆ ಮರಳುವಂತೆ ಸಾರಿಗೆ ನೌಕರರಿಗೆ ಸಿಎಂ ಮನವಿ

ಸಾರಿಗೆ ನೌಕರರ ಯೂನಿಯನ್ ನಾಯಕರನ್ನು ಸಚಿವರ ಜೊತೆ ಚರ್ಚೆ ನಡೆಸಲು ಆಹ್ವಾನಿಸಿದ್ದಾರೆ

0
post ad

ಬೆಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ, ಕರ್ತವ್ಯಕ್ಕೆ ಮರಳುವಂತೆ ಮುಷ್ಕರನಿರತ ಸಾರಿಗೆ ನೌಕರರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
ಸಾರಿಗೆ ನೌಕರರ ಯೂನಿಯನ್ ನಾಯಕರನ್ನು ಸಚಿವರ ಜೊತೆ ಚರ್ಚೆ ನಡೆಸಲು ಆಹ್ವಾನಿಸಿದ್ದಾರೆ.
ಈ ಬಗೆಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದುಷ್ಟಕರ ಸ೦ಗತಿ, ಈ ಮುಷ್ಕರದಿಂದ ರಾಜ್ಯದೆಲ್ಲಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದಿದ್ದಾರೆ.

ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಮಾನ್ಯ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ್‌ ಸವದಿ ಯವರಿಗೆ ಸಲಹೆ, ಸೂಚನೆಗಳನ್ನು ನೀಡಿದ್ದೇನೆ. ಮಾನ್ಯ ಸಾರಿಗೆ ಸಚಿವರೂ ಸಹ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ.
ಆದರೆ ರೈತ ಸಂಘದ ಮುಖಂಡರಾದ ಶ್ರೀ ಕೋಡಿಹಳ್ಳಿ ಚಂದ್ರಶೇಖರ್‌ರವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಮತ್ತು ರಾಜ್ಯದ ವಿವಿಧೆಡೆ ಕೆ.ಎಸ್‌.ಆರ್‌.ಟಿ.ಸಿ. ಮತ್ತು ಬಿ.ಎಂ.ಟಿ.ಸಿ. ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಲು ಕಾರಣಕರ್ತರಾಗಿರುತ್ತಾರೆ.
ಅಲ್ಲದೆ ಮಾಜಿ ಮುಖ್ಯ ಮಂತ್ರಿಗಳಾದ ಶ್ರೀ ಹೆಚ್‌.ಡಿ. ಕುಮಾರಸ್ವಾಮಿಯವರ ಬಗ್ಗೆ ಶ್ರೀ ಕೋಡಿಹಳ್ಳಿ ರವರು ಅತ್ಯಂತ ಲಘುವಾಗಿ ಮಾತನಾಡಿರುವುದು ಕೂಡ ಖಂಡನೀಯ ಎಂದ ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.