ರಾಜ್ಯದ ಜಿಎಸ್ ಟಿ ಪಾಲುಗಾಗಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ
ಜೊತೆಗೆ ಕೋವಿಡ್ ಹಾಗೂ ಆರ್ಥಿಕ ಸಂಕಷ್ಟದಲ್ಲಿ ಕೇಂದ್ರಸರ್ಕಾರ ಸುಗ್ರೀವಾಜ್ಞೆಯ ಮೂಲಕ ಹೊರಡಿಸಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯ


ತುಮಕೂರು : ರಾಜ್ಯದ ಜಿ ಎಸ್ ಟಿ ಪಾಲನ್ನು ರಾಜ್ಯದ ಸಂಸದರು ರಾಜ್ಯದ ಜನತೆಯ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ತರುವಂತೆ ಒತ್ತಾಯಿಸಿ ಸಂಸದ ಜಿ ಎಸ್ ಬಸವರಾಜು ಅವರ ಕಛೇರಿ ಮುಂದೆ ಭಾರತ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ನಡೆಸಿತು.
ಕೋವಿಡ್ -19 ಹಿನ್ನೆಲೆಯಲ್ಲಿ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು ರಾಜ್ಯದ ಜನತೆ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ನೀಡಿರುವ ಹಣವನ್ನು ರಾಜ್ಯದ ಅಭಿವೃದ್ಧಿಗೆ ನೀಡುವಂತೆ ರಾಜ್ಯದ 28 ಸಂಸದರು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕೆಂದು ಪ್ರತಿಭಟನಕಾರರು ಆಗ್ರಹಿಸಿದರು.
ರಾಜ್ಯದಲ್ಲಿ ಅತಿವೃಷ್ಟಿ ಅನಾವೃಷ್ಟಿ ಇಂದ ಅನೇಕ ಜನರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನತೆಯ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರಸರ್ಕಾರ ವಿಫಲವಾಗಿದೆ. ಇದರ ಜೊತೆಗೆ ಕೋವಿಡ್ ಹಾಗೂ ಆರ್ಥಿಕ ಸಂಕಷ್ಟದಲ್ಲಿ ಕೇಂದ್ರಸರ್ಕಾರ ಸುಗ್ರೀವಾಜ್ಞೆಯ ಮೂಲಕ ಹೊರಡಿಸಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕೇಂದ್ರಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಬರಬೇಕಿರುವ ಜಿ ಎಸ್ ಟಿ ಬಾಕಿ, ಬಜೆಟ್ ಅನುದಾನದ ಬಾಕಿ, ಕೋವಿಡ್ ಪರಿಹಾರದ ಮೊತ್ತವನ್ನು ಕೂಡಲೇ ಕೇಂದ್ರಸರ್ಕಾರ ಬಿಡುಗಡೆ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನೂ ನಗರ ಪ್ರದೇಶಕ್ಕೂ ವಿಸ್ತರಿಸುವ ಮೂಲಕ ನಿರುದ್ಯೋಗವನ್ನು ಕಡಿಮೆ ಮಾಡಬೇಕು ಪ್ರಜಾ ಸತಾತ್ಮಕ ಹಕ್ಕುಗಳು ಮತ್ತು ಸಂವಿಧಾನದ ಹಕ್ಕುಗಳ ಉಳಿವಿಗಾಗಿ ಶಾಂತಿಯುತ ರಾಜಕೀಯ ಚಳುವಳಿಗಳನ್ನು ಕ್ರಿಮಿನಲ್ ಅಫರಾದಗಳೆಂದು ಬಿಂಬಿಸುವ ಸಂವಿಧಾನ ವಿರೋಧಿಯ ದುಷ್ಕೃತ್ಯವನ್ನು ತಡೆಯುವ ಕಾನೂನಗಳನ್ನು ಜಾರಿಗೊಳಿಸಬೇಕೆಂದು ಇದೆ ವೇಳೆ ಒತ್ತಾಯಿಸಲಾಯಿತು.
ವರದಿ :
ರವಿ ಚಿಂಪುಗಾನಹಳ್ಳಿ,
ತುಮಕೂರು ವರದಿಗಾರ