Take a fresh look at your lifestyle.

ಕಾರ್ಮಿಕರ ನಿಗಮ ಸ್ಥಾಪಿಸಿ : ಹಮಾಲಿ ಕಾರ್ಮಿಕರು

ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿರೋಧ..... ಹಮಾಲಿ, ಕಾರ್ಮಿಕರ ಪ್ರತಿಭಟನೆಯಲ್ಲಿ ಕೇಳಿ ಬಂದ ಕೂಗು

0
post ad

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಎಪಿಎಂಸಿ ಕಾರ್ಮಿಕ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಎಪಿಎಂಸಿ ಯಾರ್ಡ್‌ಗಳ ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ಯಶವಂತಪುರ ಎಪಿಎಂಸಿ ಹಮಾಲಿಗಳು, ಕಾರ್ಮಿಕರು ಪ್ರತಿಭಟಿಸಿ, ಪ್ರತ್ಯೇಕ ನಿಗಮಕ್ಕೆ ಬೇಡಿಕೆ ಇಟ್ಟಿದ್ದಾರೆ.

‘ಹಮಾಲಿಗಳು ಹಾಗೂ ಕಾರ್ಮಿಕರ ಅಭಿವೃದ್ದಿಗಾಗಿ ‘ಎಪಿಎಂಸಿ ಕಾರ್ಮಿಕರ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು. ಅಸಂಘಟಿತರಾಗಿರುವ ಇವರಿಗೆ ಪಿಂಚಣಿ ಸೌಲಭ್ಯಗಳನ್ನು ನೀಡಬೇಕು. ಕಾರ್ಮಿಕ ಇಲಾಖೆಯಿಂದ ಎಲ್ಲ ರೀತಿಯ
ಸವಲತ್ತುಗಳು ಸಿಗಬೇಕು. ಪ್ರಾಂಗಣಗಳಲ್ಲಿ ಆಸ್ಪತ್ರೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು’ ಎಂದು ಸೋಮವಾರ ಆಗ್ರಹಿಸಿದ್ದರು.
‘ಬೇಡಿಕೆಗಳ ಬಗ್ಗೆ ಗಮನಸೆಳೆದು ಹಮಾಲಿ, ಕಾರ್ಮಿಕರು ಕಾಲ್ನಡಿಗೆ ಜಾಥಾ ನಡೆಸಿ ಎಪಿಎಂಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ಡಿ.28ರವರೆಗೆ ಸಮಯ ನೀಡಿದ್ದೇವೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ, ಎಲ್ಲ ಕೆಲಸಗಳನ್ನು ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ’ ಎಂದೂ ಎಚ್ಚರಿಸಿದ್ದರು.
ಎಪಿಎಂಸಿ ಸೆಸ್‌ ಹೆಚ್ಚಳ ವಿರೋಧಿಸಿ ರಾಜ್ಯದ ಎಪಿಎಂಸಿಗಳಲ್ಲಿ
ಸಾಂಕೇತಿಕವಾಗಿ ಸೋಮವಾರ ಬಂದ್‌ ನಡೆಯಿತು. ಆದರೆ, ಯಶವಂತಪುರ ಎಪಿಎಂಸಿ ವರ್ತಕರು ಬಂದ್‌ ನಡೆಸಲಿಲ್ಲ. ಪ್ರಾಂಗಣದಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯಿತು.
ಎಪಿಎಂಸಿ ಮಂಡಿ ಹಮಾಲಿ ಕಾರ್ಮಿಕರ ಸಂಘ, ಎಪಿಎಂಸಿ ಲೋಡಿಂಗ್‌, ಅನ್‌ ಲೋಡಿಂಗ್‌ ಮತ್ತು ಜನರಲ್‌ ವರ್ಕರ್ಸ್‌ ಯೂನಿಯನ್‌, ಮಹಿಳಾ ಹಮಾಲಿ ಕಾರ್ಮಿಕರ ಸಂಘ ಹಾಗೂ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್‌ ಸಂಘಟನೆಗಳು ಸೋಮವಾರ ನಡೆದ ಪ್ರತಿಭಟನೆಗೆ ಬೆಂಬಲ ನೀಡಿದ್ದವು.

ಪ್ರತಿಭಟನೆ ಅಂಗವಾಗಿ ಪ್ರಾಂಗಣದಲ್ಲಿ ಕೆಲಸ ಮಾಡುವ ಹಮಾಲಿಗಳು ಹಾಗೂ ಕಾರ್ಮಿಕರು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತಮ್ಮ ಕೆಲಸಗಳನ್ನು ಬಹಿಷ್ಕರಿಸಿ, ಪ್ರತಿಭಟನೆಯಲ್ಲಿ ಭಾಗವಹಿಸಿದರು.