Take a fresh look at your lifestyle.

ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ಸಿಹಿ ಸುದ್ದಿ

ಹೆಚ್ಚಿನ ಅವಧಿ ದುಡಿಸಿಕೊಳ್ಳುವ ಕಾರ್ಮಿಕರಿಗೆ ಹೆಚ್ಚುವರಿ ವೇತನವನ್ನು ಕಡ್ಡಾಯವಾಗಿ ನೀಡಬೇಕು

0
post ad

ನವದೆಹಲಿ : ಕೇಂದ್ರ ಕಾರ್ಮಿಕ ಸಚಿವಾಲಯವು ಹೆಚ್ಚಿನ ಅವಧಿ ದುಡಿಸಿಕೊಳ್ಳುವ ಕಾರ್ಮಿಕರಿಗೆ ಹೆಚ್ಚುವರಿ ವೇತನವನ್ನು ಕಡ್ಡಾಯವಾಗಿ ನೀಡಬೇಕು ಎಂಬ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ.

ಈ ಬಗೆಗೆ‌ ಕಾರ್ಮಿಕ ಸಚಿವಾಲಯದ ಕಾರ್ಯದರ್ಶಿ ಹಿರಾಲಾಲ್ ಸಮರೀಯಾ ಸಂಸದೀಯ ಸದನ ಸಮಿತಿಗೆ ಈ ಸಂಬಂಧ ಸೂಚನೆ ನೀಡಿದ್ದು, ಕಾರ್ಮಿಕ ಕಾನೂನುಗಳ ಪ್ರಕಾರ ಅಧಿಕ ಅವಧಿಗೆ ದುಡಿಸಿಕೊಳ್ಳುವ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದ್ದಾರೆ. ದೇಶದಲ್ಲಿ ಲಾಕ್ ಡೌನ್ ಬಳಿಕ ಕೆಲವು ರಾಜ್ಯಗಳು ಕಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಿ ಕೆಲಸದ ಅವಧಿಯನ್ನು 8 ಗಂಟೆಯ ಬದಲಿಗೆ 12 ಗಂಟೆಗಳಿಗೆ ಹೆಚ್ಚಳ ಮಾಡಿದ್ದವು. ಹೀಗಾಗಿ ಹೆಚ್ಚಿನ ಅವಧಿ ದುಡಿಸಿಕೊಳ್ಳುವ ಕಾರ್ಮಿಕರಿಗೆ ಹೆಚ್ಚುವರಿ ವೇತನ ನೀಡಬೇಕು ಎಂದು ಸದನ ಸಮಿತಿಗೆ ತಿಳಿಸಿದ್ದಾರೆ.

ಹೆಚ್ಚುವರಿ ಅವಧಿ ಕೆಲಸ ಮಾಡುವ ಕಾರ್ಮಿಕರಿಗೆ ದಿನದ ಮೂಲ ವೇತನದ ಶೇ. 200 ರಷ್ಟನ್ನು ಹಾಗೂ ರಜೆ ದಿನಗಳಲ್ಲಿ ಕೆಲಸ ಮಾಡುವವರಿಗೆ ಶೇ. 300 ರಷ್ಟು ವೇತನ ನೀಡಬೇಕು ಎಂದು ಹಿರಾಲಾಲ್ ತಿಳಿಸಿದ್ದಾರೆ.