ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆ
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ವತಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು


ತುಮಕೂರು : ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ವತಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು.
ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಠ ವೇತನ ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್ಗಳಿಗೆ, ಗುಮಾಸ್ತರಿಗೆ ವೇತನ ಜಾರಿ ಮಾಡಬೇಕು. ಬಾಕಿ ವೇತನ ತೆರಿಗೆ ಸಂಗ್ರಹದಲ್ಲಿ 14ನೇ ಹಾಗೂ 15ನೇ ಹಣಕಾಸು ಆಯೋಗದ ಹಣದಲ್ಲಿ ಬಾಕಿ ಉಳಿದ ಸಿಬ್ಬಂದಿ ವೇತನ ಪಾವತಿಸಬೇಕು. ನಿವೃತ್ತಿಯಾದವರಿಗೆ 15 ತಿಂಗಳು ಗ್ರಾಜ್ಯುಟಿ ನೀಡಬೇಕು. ಸರ್ಕಾರದ ಆದೇಶದಂತೆ ಅನುಕಂಪದ ನೇಮಕಾತಿ ಮಾಡಲು ನಿರ್ದೇಶನ ನೀಡಬೇಕು. ಹೊಸದಾಗಿ ಕಾನೂನುಬಾಹಿರವಾಗಿ ಅಕ್ರಮ ನೇಮಕಾತಿ ಮಾಡಿಕೊಳ್ಳುವುದನ್ನು ತಡೆಯಬೇಕು. ಈಗಾಗಲೇ ನೇಮಕಾತಿ ಮಾಡಿಕೊಂಡವರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ನೇಮಕಾತಿ ರದ್ದು ಮಾಡಬೇಕು.
ಕಲೆಕ್ಟರ್ರಿಂದ ಗ್ರೇಡ್-2 ಕಾರ್ಯದರ್ಶಿ ಹಾಗೂ ಲೆಕ್ಕ ಸಹಾಯಕ ಹುದ್ದೆಗಳಿಗೆ ಬಡ್ತಿ ನೀಡಬೇಕು. ಸರ್ಕಾರಿ ಆದೇಶಗಳನ್ನು ಜಾರಿ ಮಾಡದ ಪಿಡಿಒಗಳ ಮೇಲೆ ಸೂಕ್ತ ಕ್ರಮ ವಹಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ನಡೆಸಲಾಯಿತು.
ವರದಿ :
ರವಿ ಚಿಂಪುಗಾನಹಳ್ಳಿ,
ತುಮಕೂರು ವರದಿಗಾರ