Take a fresh look at your lifestyle.

ಐಟಿಸಿ ಕಾರ್ಮಿಕರ ಪ್ರತಿಭಟನೆ

ಐಟಿಸಿ ಕಾರ್ಖಾನೆ ಕಾರ್ಮಿಕರು, ಮೇಲಧಿಕಾರಿಗಳ ಕಿರುಕುಳ ವಿರುದ್ಧ ಹಾಗೂ ವಜಾಗೊಳಿಸಿರುವ ಕಾರ್ಮಿಕರನ್ನು ಮರುನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು

0
post ad

ಮೈಸೂರು: ನಗರದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಎದುರು ಐಟಿಸಿ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದರು.
ನಂಜನಗೂಡು ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಾರ್ಖಾನೆ ಕಾರ್ಮಿಕರು, ಮೇಲಧಿಕಾರಿಗಳ ಕಿರುಕುಳ ವಿರುದ್ಧ ಹಾಗೂ ವಜಾಗೊಳಿಸಿರುವ ಕಾರ್ಮಿಕರನ್ನು ಮರುನೇಮಕ  ಮಾಡಿಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಐಟಿಸಿ ಕಾರ್ಖಾನೆ ವ್ಯವಸ್ಥಾಪಕ ರಾಜೇಂದ್ರ ಬಾಬು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಕಾರ್ಮಿಕರು ಮನವಿ ಮಾಡಿದರು.
ರೈತ ಮುಖಂಡ ವಿದ್ಯಾಸಾಗರ್‌ ನೇತೃತ್ವದಲ್ಲಿ ಪ್ರತಿಭಟನಾಕಾರರು ಸಿದ್ದರಾಮಯ್ಯಗೆ ಮನವಿ ಮಾಡಿದರು. ಈ ಹಿಂದೆಯೂ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಕಾರ್ಮಿಕರ ಸಮಸ್ಯೆ ಬಗೆಹರಿಸಿದ್ದರು.
ಪ್ರತಿಭಟನಾ ನಿರತ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಹಾಗೂ ವಿದ್ಯಾಸಾಗರ್‌ ಸೇರಿದಂತೆ ಕಾರ್ಖಾನೆಯ 5 ಜನರನ್ನು ನಿವಾಸಕ್ಕೆ ಕರೆದು ಸಿದ್ದರಾಮಯ್ಯ ಮನವಿ ಸ್ವೀಕರಿಸಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಕಾರ್ಮಿಕ ಉಪ ಆಯುಕ್ತ ತಮ್ಮಣ್ಣ ಉಪಸ್ಥಿತರಿದ್ದರು.  ಕಾರ್ಖಾನೆ ಯವರು ಹಾಗೂ ಕಾರ್ಮಿಕ ಉಪ ಆಯುಕ್ತರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಾತ್ಕಾಲಿಕವಾಗಿ ಪ್ರತಿಭಟನೆ ಕೈಬಿಟ್ಟರು.
ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡ ರವಿಕುಮಾರ್‌, ಮದನ್‌ ಕುಮಾರ್‌, ವಿದ್ಯಾಸಾಗರ್‌ ಟಿ.ಆರ್‌, ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮೂರ್ತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.