Take a fresh look at your lifestyle.

ನವೆಂಬರ್ 26 ಮುಷ್ಕರಕ್ಕೆ ಜೆಸಿಟಿಯುಯಿಂದ ಪೂರ್ವಭಾವಿ ಸಭೆ

ರೇಸ್ ಕೋರ್ಸ್ ಬಳಿ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸದಸ್ಯರೆಲ್ಲರೂ ಭಾಗವಹಿಸಿ ಸುದೀರ್ಘ ಚರ್ಚೆಯನ್ನು ನಡೆಸಿದರು

0
post ad

ಬೆಂಗಳೂರು : ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿಗಳ ವಿರುದ್ದ ಪರ್ಯಾಯವಾಗಿ ಹಾಗೂ ಕೊವೀಡ್ ಪರಿಹಾರಕ್ಕಾಗಿ ಆಗ್ರಹಿಸಿ, ನವೆಂಬರ್ 26 ರಂದು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಕರೆ ನೀಡಿರುವ ರಾಷ್ಷ್ರವ್ಯಾಪಿ ಸಾರ್ವತ್ರಿಕ ಮುಷ್ಕರದ ಬಗೆಗೆ ಕ್ರಿಯಾ ಯೋಜನೆಗಳನ್ನು ರೂಪಿಸಲು ರಾಜ್ಯ ಜೆಸಿಟಿಯು ಸಭೆಯನ್ನು ಹಮ್ಮಿಕೊಂಡಿತ್ತು.
ಬೆಂಗಳೂರಿನ ರೇಸ್ ಕೋರ್ಸ್ ಬಳಿ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸದಸ್ಯರೆಲ್ಲರೂ ಭಾಗವಹಿಸಿ ಸುದೀರ್ಘ ಚರ್ಚೆಯನ್ನು ನಡೆಸಿದರು.
ಕೇಂದ್ರ ಸರ್ಕಾರವು ಕಾರ್ಪೋರೇಟ್ ಬಂಡವಾಳಗಾರರ ಪರ 29 ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ 4 ಸಂಹಿತೆಗಳನ್ನಾಗಿ ಸಂಸತ್ತಿನಲ್ಲಿ ಅಂಗೀಕರಿಸಿರುವುದು ಸೇರಿದಂತೆ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಈ ವೇಳೆ ಜೆಸಿಟಿಯು ಒಮ್ಮತದಿಂದ ಖಂಡಿಸಿತು.
ಸರ್ಕಾರ ಬಂಡವಾಳಗಾರರಿಗೆ ಮುಕ್ತ ಅವಕಾಶ ನೀಡಿದೆ
ಈ ನೀತಿಯಿಂದಾಗಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಆರ್ಥಿಕತೆಯು ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ. ಅದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂಗೀಕರಿಸುತ್ತಿರುವ ರೈತ ವಿರೋಧಿ ಶಾಸನಗಳಾದ ಭೂ- ಸುಧಾರಣೆ ಕಾಯ್ದೆ,ಎಪಿಎಂಸಿ ಕಾಯ್ದೆ ಅಗತ್ಯ ವಸ್ತುಗಳ ಕಾಯ್ದೆ ಗಳನ್ನು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವಿರೋಧಿಸಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳ ವಿರುದ್ದ ಕೇಂದ್ರ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಹಮ್ಮಿಕೊಂಡಿರುವ ಮುಷ್ಕರವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಮಿಕ ಒಕ್ಕೂಟದ ನಾಯಕರು ನಾಡಿನ ಜನತೆಗೆ ಕರೆ ನೀಡಿದರು.
ಎಐಟಿಯುಸಿ, ಐಎನ್ ಟಿಯುಸಿ, ಎಚ್ಎಂಎಸ್, ಸಿಐಟಿಯು, ಟಿಯುಸಿಸಿ, ಎಐಯುಟಿಯುಸಿ, ಎಐಸಿಸಿಟಿಯು, ಎಚ್ಎಂಕೆಪಿ, ಜಿಎಟಿಡಬ್ಲ್ಯುಯು ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.