Take a fresh look at your lifestyle.

ರೈತ ಹೋರಾಟದ ಪರ ಜೆಸಿಟಿಯು ಪ್ರತಿಭಟನಾ ಧರಣಿ

21ನೇ ಶತಮಾನದಲ್ಲೇ ಅತ್ಯಂತ ಪರಿಣಾಮಕಾರಿ ನಡೆಯುತ್ತಿರುವ ರೈತ ಹೋರಾಟವು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಯಲು ಜೆಸಿಟಿಯು ಕಾರ್ಮಿಕ ಸಂಘಟನೆಗಳು ಸಾಂಕೇತಿಕ ಧರಣಿಗೆ ಸಾಕ್ಷಿಯಾಗಿವೆ..

0
post ad

ಬೆಂಗಳೂರು : ರೈತರು ದೆಹಲಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ‌ ಬೆಂಬಲ ಸೂಚಿಸಿ ಜೆಸಿಟಿಯು ಬೆಂಗಳೂರಿನಲ್ಲಿ ಪ್ರತಿಭಟನಾ ಧರಣಿಯನ್ನು ಆರಂಭಿಸಿದೆ.


ನಗರದ ಮೌರ್ಯ ವೃತ್ತದ ಬಳಿಯ ಗಾಂಧಿ ಪ್ರತಿಮೆಯ ಬಳಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಮುಖಂಡರು ಮತ್ತವರವರ ಕಾರ್ಮಿಕ ಸಮ್ಮಿಳಿತ ಸಂಘಗಳ ಸದಸ್ಯರು, ಪದಾಧಿಕಾರಿಗಳು, ಕಾರ್ಮಿಕರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.


ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ರೈತರು ಹಮ್ಮಿಕೊಂಡಿರುವ ಐತಿಹಾಸಿಕ ದೆಹಲಿ ರೈತ ಹೋರಾಟ 30ನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಹೋರಾಟವನ್ನು ಬೆಂಬಲಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಸಾಂಕೇತಿಕ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಕೇಂದ್ರ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್‌, ಎಐಯುಟಿಯುಸಿ, ಟಿಯುಸಿಸಿ, ಎಐಸಿಸಿಟಿಯು, ಯುಟಿಯುಸಿ ಸೇರಿದಂತೆ ಹಲವು ಒಕ್ಕೂಟಗಳ ಮುಂಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇನ್ನು, ಪ್ರತಿಭಟನೆಯ ಆರಂಭದಲ್ಲಿ ರೈತ ಹೋರಾಟದಲ್ಲಿ ಹುತಾತ್ಮರಾದ ರೈತರಿಗೆ ಪ್ರತಿಭಟನಾ ನಿರತರು ಮೌನಾಚರಣೆಯನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ಟಿಯುಸಿಸಿ ರಾಜ್ಯಾಧ್ಯಕ್ಷ ಜಿ.ಆರ್ ಶಿವಶಂಕರ್ ಕೇಂದ್ರ ಸರ್ಕಾರದ ಜಾರಿಗೆ ತರುತ್ತಿರುವ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳು, ಕಾಯ್ದೆಗಳ ಕಿಡಿಕಾರಿದರು.
ನಿರಂಕುಶ ಪ್ರಭುತ್ವದಂತೆ ವರ್ತಿಸುತ್ತಿರುವ ಕೇಂದ್ರ ಸರ್ಕಾರ ರೈತ, ಕಾರ್ಮಿಕ ಕಾಯ್ದೆಗಳನ್ನು ಹಿಂಪಡೆಯಬೇಕೆಂದರು. ಇನ್ನು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಬಿಸಿ ಯೋಜನೆಯು ಕಾರ್ಮಿಕನ ಕೊಲೆ ಮಾಡಿದಂತೆ ಆಗುತ್ತದೆ ಎಂದರು.