Take a fresh look at your lifestyle.

ಬೆಂಗಳೂರಲ್ಲಿ ಬಸ್ ಓಡಾಟ ವಿರಳ

ಬಿಎಂಟಿಸಿ ಜೊತೆಗೆ ಇತರೆ ಮೂರು ಸಾರಿಗೆ ನಿಗಮಗಳಾದ ಕೆಎಸ್‍ಆರ್ ಟಿಸಿ ಸಾರಿಗೆ ನಿಗಮ, ವಾಯುವ್ಯ ಸಾರಿಗೆ ನಿಗಮ ಹಾಗೂ ನೈರುತ್ಯ ಸಾರಿಗೆ ನಿಗಮ ನೌಕರರು ಕೂಡ ಮುಷ್ಕರಕ್ಕೆ ಇಳಿದಿದ್ದಾರೆ

0
post ad

ಬೆಂಗಳೂರು : ಸಾರಿಗೆ ಸಿಬ್ಬಂದಿ ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ನೆನ್ನೆ ಬೃಹತ್ ಜಾಥಾ ನಡೆಸಿದರೂ ಸರ್ಕಾರ ಅಹವಾಲು ಸ್ವೀಕರಿಸದ ಕಾರಣಕ್ಕೆ ಇಂದು ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೂ ಬಸ್ ಆರಂಭ ಮಾಡದೇ ಇರಲು ನಿರ್ಧಾರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಹುತೇಕ ಬಿಎಂಟಿಸಿ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉದ್ಭವಿಸಿದೆ.
ಬಿಎಂಟಿಸಿ ಜೊತೆಗೆ ಇತರೆ ಮೂರು ಸಾರಿಗೆ ನಿಗಮಗಳಾದ ಕೆಎಸ್‍ಆರ್ ಟಿಸಿ ಸಾರಿಗೆ ನಿಗಮ, ವಾಯುವ್ಯ ಸಾರಿಗೆ ನಿಗಮ ಹಾಗೂ ನೈರುತ್ಯ ಸಾರಿಗೆ ನಿಗಮ ನೌಕರರು ಕೂಡ ಮುಷ್ಕರಕ್ಕೆ ಇಳಿದಿದ್ದಾರೆ. ಇದರಿಂದ ರಾಜ್ಯಾದ್ಯಂತ ಸಾರಿಗೆ ವಾಹನಗಳಲ್ಲಿ ವ್ಯತ್ಯಯ ಉಂಟಾಗಲಿದೆ.
ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆಗಳಲ್ಲಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ಜನ ಕಾರ್ಯನಿರ್ವಹಿಸುತ್ತಿದ್ದಾರೆ.
ಇತ್ತೀಚೆಗೆ ಸದನದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾತನಾಡುತ್ತಾ, ರಾಜ್ಯ ಸರ್ಕಾರ ಹಣಕಾಸಿನ ಸಮಸ್ಯೆ ಎದುರಿಸುತ್ತಿರುವುದರಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಲ್ಲಿಂದ ಹೊತ್ತಿಕೊಂಡ ಸಾರಿಗೆ ಸಿಬ್ಬಂದಿಯ ಕಿಚ್ಚು ಇಂದು ಮುಷ್ಕರಕ್ಕೆ ಕಾರಣವಾಗಿದೆ.