ಗರೀಬ್ ಕಲ್ಯಾಣ್ ಯೋಜನೆಗೆ ಪ್ರಧಾನಿ ಚಾಲನೆ, ವಲಸೆ ಕಾರ್ಮಿಕರಿಗೆ ಹೊಸ ಭರವಸೆ


ನವದೆಹಲಿ : 50 ಸಾವಿರ ಕೋಟಿ ರೂ ಮೌಲ್ಯದ ಗರೀಬ್ ಕಲ್ಯಾಣ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆಯನ್ನು ನೀಡಿದರು. ಈ ಯೋಜನೆಯಿಂದ ವಲಸೆ ಕಾರ್ಮಿಕರಿಗೆ ಉದ್ಯೋಗ ಸೃಷ್ಠಿಯಾಗುವ ಸಾಧ್ಯತೆಗಳು ಇರುವುದರಿಂದ ವಲಸೆ ಕಾರ್ಮಿಕರು ಅದೆಷ್ಟೋ ಕಾತುರದಿಂದ ಈ ಯೋಜನೆಗಾಗಿ ಎದುರು ನೋಡುತ್ತಿದ್ದರು.
ಮೊನ್ನೆ, ಇದೇ ವಿಚಾರವಾಗಿ ತಿಳಿಸಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಗರೀಬ್ ಕಲ್ಯಾಣ ರೋಜ್ ಗಾರ್ ಅಭಿಯಾನದಡಿಯಲ್ಲಿ ಕೇಂದ್ರ ಸರ್ಕಾರ ಸುಮಾರು 50 ಸಾವಿರ ಕೋಟಿ ಮೌಲ್ಯದ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇದರಲ್ಲಿ ದೇಶದ ಸಾವಿರಾರು ವಲಸೆ ಕಾರ್ಮಿಕರಿಗೆ ಉದ್ಯೋಗ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಕೋವಿಡ್ 19 ನಿಂದಾಗಿ ಕೆಲಸ ಬಿಟ್ಟು ತವರು ಸೇರಿದ್ದ ಸುಮಾರು 25 ಸಾವಿರ ವಲಸೆ ಕಾರ್ಮಿಕರನ್ನು ಯೋಜನೆ ನಿಮಿತ್ತ ಆಯ್ಕೆ ಮಾಡಲಾಗಿದೆ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾದ 116 ಜಿಲ್ಲೆಗಳ 25 ಸಾವಿರ ವಲಸೆ ಕಾರ್ಮಿಕರು ಕೇಂದ್ರ ಸರ್ಕಾರದ ಈ ಅಭಿಯಾನದ ಭಾಗವಾಗಿರಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಕೇಂದ್ರ ಸರ್ಕಾರದ ಉದ್ದೇಶಿತ ಯೋಜನೆಯಡಿಯಲ್ಲಿ ವಲಸೆ ಕಾರ್ಮಿಕರು ಆರು ವಿವಿಧ ಕಾಮಗಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲ್ಲಿದ್ದು, ವಾರ್ಷಿಕ 125 ದಿನಗಳ ಕಾಲ ಅವರಿಗೆ ಉದ್ಯೋಗ ದೊರೆಯಲಿದೆ.
ಕೆಲಸವಿಲ್ಲದೆ ಮನೆ ಸೇರಿಕೊಂಡಿರುವ ವಲಸೆ ಕಾರ್ಮಿಕರಿಗೆ
ಈ ಯೋಜನೆಯಿಂದ ಹೊಸ ಭರವಸೆಯೊಂದು ಸಿಕ್ಕಿದ್ದು, ಇದರ ಉಪಯೋಗವನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು.
ದಿನಕ್ಕೆ ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ 202 ರೂಪಾಯಿ ವೇತನ ನಿಗದಿಪಡಿಸಲಾಗಿದೆ.
ಕೇಂದ್ರ ಸರ್ಕಾರದ ಈ ನೂತನ ಅಭಿಯಾನದಲ್ಲಿ 25 ರೀತಿಯ ಉದ್ಯೋಗವಕಾಶಗಳನ್ನು ಕಲ್ಪಿಸಿ ಕೊಡಲಾಗುತ್ತಿದ್ದು, ಇದಕ್ಕೆ 50,000 ಕೋಟಿ ರೂಪಾಯಿಯನ್ನು ಮೀಸಲು ಇರಿಸಲಾಗಿದೆ. ಮನರೇಗಾ ಕೂಲಿ ಕಾರ್ಮಿಕರಿಗೆ ದಿನಗೂಲಿ ಆಧಾರದಲ್ಲಿ ವೇತನವನ್ನು ನೀಡಲಾಗುತ್ತದೆ.
ಮನರೇಗಾ ಯೋಜನೆ ಅಡಿಯಲ್ಲಿ ಉದ್ಯೋಗ ಮಾಡುತ್ತಿದ್ದ ಕಾರ್ಮಿಕರ ಪಟ್ಟಿಯನ್ನು ಗ್ರಾಮಗಳಿಗೆ ವಾಪಸ್ ಕಳುಹಿಸಲಾಗಿದೆ. ಸರ್ಕಾರವು ಈ ಪಟ್ಟಿಯನ್ನು ಅನುಗುಣವಾಗಿಟ್ಟುಕೊಂಡು ಕಾರ್ಮಿಕರನ್ನು ಗುರುತಿಸಲಾಗುತ್ತದೆ. ಅದೇ ಪಟ್ಟಿ ಆಧಾರದ ಮೇಲೆ ಕೂಲಿ ಕಾರ್ಮಿಕರಿಗೆ ಸಾಮರ್ಥ್ಯದ ಆಧಾರದ ಮೇಲೆ ಉದ್ಯೋಗವನ್ನು ನೀಡಲಾಗುತ್ತದೆ. ನಗರ ಪ್ರದೇಶಗಳಿಂದ ಗ್ರಾಮಗಳಿಗೆ ವಲಸೆ ತೆರಳಿರುವ ಕೂಲಿ ಕಾರ್ಮಿಕರ ವಿವರವನ್ನು ಪಡೆದು ಅಭಿಯಾನದ ಫಲಾನುಭವವನ್ನು ತಲುಪಿಸುವ ಜವಾಬ್ದಾರಿಯನ್ನು ಆಯಾ ಜಿಲ್ಲಾಡಳಿತಕ್ಕೆ ವಹಿಸಲಾಗಿದೆ.
ಗರೀಬ್ ಕಲ್ಯಾಣ್ ರೋಜಗಾರ್ ಅಭಿಯಾನದ ಅಡಿಯಲ್ಲಿ ವಲಸೆ ಕಾರ್ಮಿಕರಿಗೆ ಉದ್ಯೋಗ ನೀಡುವುದು. ಕೌಶಲ್ಯ ಹಾಗೂ ಆಸಕ್ತಿಗೆ ಅನುಗುಣವಾಗಿ ಸ್ವಯಂ-ಉದ್ಯೋಗಕ್ಕೆ ಆರ್ಥಿಕ ನೆರವು ನೀಡುವುದಕ್ಕೆ ಸರ್ಕಾರವು ಮುಂದಾಗಿದೆ. ಈ ಅಭಿಯಾನದ ಅಡಿಯಲ್ಲಿ ರಸ್ತೆ ಕಾಮಗಾರಿ, ಗ್ರಾಮೀಣ ವಸತಿ ನಿರ್ಮಾಣ, ತೋಟಗಾರಿಕೆ, ನೀರಿನ ಸಂರಕ್ಷಣೆ ಮತ್ತು ನೀರಾವರಿ, ಅಂಗನವಾಡಿ, ಪಂಚಾಯತ್ ಭವನ, ಮತ್ತು ಜಲ ಜೀವನ್ ಮಿಷನ್ ಸೇರಿದಂತೆ 25 ವಲಯಗಳಲ್ಲಿ ಉದ್ಯೋಗವನ್ನು ನೀಡಲಾಗುತ್ತಿದೆ.