Take a fresh look at your lifestyle.

ಕಾರ್ಮಿಕ ವರ್ಗದ ಹಕ್ಕುಗಳ ರಕ್ಷಣೆಗಾಗಿ ಪ್ರತಿಭಟನೆ

ಕಾರ್ಮಿಕ ಹಕ್ಕುಗಳನ್ನು ಉಳಿಸುತ್ತೇವೆ, ರೈತರ ಬದುಕನ್ನು ರಕ್ಷಿಸುತ್ತೇವೆ, ಕಾರ‍್ಫೋರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ ಎಂಬ ಪ್ರತಿಜ್ಞೆ ಯೊಂದಿಗೆ ಹೊಸ ವರ್ಷದ ದಿನವನ್ನು ಸ್ವಾಗತಿಸಿದರು

0
post ad

ದಾವಣಗೆರೆ:ಕೇಂದ್ರ ಸರ್ಕಾರದ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ಕಾಯಿದೆಗಳ ಪ್ರತಿಗಳನ್ನು ಸುಡುವ ಮೂಲಕ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಪದಾಧಿಕಾರಿಗಳು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಮ್ಮ ಹಕ್ಕಿಗಾಗಿ ಪ್ರತಿಭಟನೆ ಮೂಲಕ ಹೊಸ ವರ್ಷದ ದಿನವನ್ನು ಆಚರಿಸುತ್ತಿದ್ದು ಕಾರ್ಮಿಕ ಹಕ್ಕುಗಳನ್ನು ಉಳಿಸುತ್ತೇವೆ, ರೈತರ ಬದುಕನ್ನು ರಕ್ಷಿಸುತ್ತೇವೆ, ಕಾರ‍್ಫೋರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ ಎಂಬ ಪ್ರತಿಜ್ಞೆ ಯೊಂದಿಗೆ ಹೊಸ ವರ್ಷದ ದಿನವನ್ನು ಸ್ವಾಗತಿಸಲಾಗುವುದು ಎಂದು ಪ್ರತಿಭಟನಾಕಾರರು ಪ್ರತಿಕ್ರಿಯೆ ನೀಡಿದರು. ಎಲ್ಲಾ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ಧುಗೊಳಿಸಬೇಕು.ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು.ವಿದ್ಯುತ್ ಮಸೂದೆ 2020 ನ್ನು ಹಿಂದಕ್ಕೆ ಪಡೆಯಬೇಕು.ಎಲ್ಲಾ ರೀತಿಯ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು.
ಆದಾಯ ತೆರಿಗೆಯ ಮಿತಿಯಿಂದ ಹೊರಗಿರುವ ಎಲ್ಲಾ ಕುಟುಂಬಗಳಿಗೂ ಮಾಸಿಕ ರೂ.7,500/- ನಗದು ಹಣ ವರ್ಗಾವಣೆ ಮಾಡಬೇಕು. ಬಡವರಿಗೆ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು 10 ಕೆ.ಜಿ. ಆಹಾರ ಉಚಿತವಾಗಿ ನೀಡಬೇಕು.ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ವಾರ್ಷಿಕ 200 ದಿನಗಳ ಕೆಲಸ  ಮತ್ತು ದಿನಕ್ಕೆ ರೂ 700/- ಕೂಲಿ ನೀಡಬೇಕು, ನಗರ ಪ್ರದೇಶಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ರಕ್ಷಣಾ ಯೋಜನೆಗಳನ್ನು ವಿಸ್ತರಿಸಬೇಕು.ಉಚಿತ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಎಲ್ಲರಿಗೂ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಜಿಲ್ಲಾ ಸಂಚಾಲಕ ಆನಂದರಾಜು ಕೆ.ಹೆಚ್.ನೇತೃತ್ವದಲ್ಲಿ ಹಲವರಿದ್ದರು.