Take a fresh look at your lifestyle.

ಸಾರಿಗೆ ಸಿಬ್ಬಂದಿ ವೇತನ ಸ್ಥಗಿತ ಇಲ್ಲ – ಸವದಿ

ಸಚಿವರ ಅಭಯದಿಂದ ಸಾರಿಗೆ ಸಿಬ್ಬಂದಿ ನಿರಾಳ

0
post ad

ಚಿಕ್ಕೋಡಿ: ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳವನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಿರ್ಮಿಸಲಾಗಿರುವ ನೂತನ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ್ ಭವನ, ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸವದಿಯವರು ಈ ಬಗೆಗೆ ಸ್ಪಷ್ಟನೆ ನೀಡಿದರು.
ಸದ್ಯ 2,652 ಕೋಟಿ ನಷ್ಟವನ್ನು ಕೆ.ಎಸ್.ಆರ್.ಟಿ.ಸಿ ಅನುಭವಿಸುತ್ತಿದೆ. ಆದರೂ ಸಂಸ್ಥೆಯ 1 ಲಕ್ಷ 30 ಸಾವಿರ ಸಿಬ್ಬಂದಿಗೆ ವೇತನ ನೀಡಲಾಗುವುದು ಎಂದರು.
ಸಿಬ್ಬಂದಿಗೆ ವೇತನವಾಗಿಯೇ ಪ್ರತಿ ತಿಂಗಳು 126 ಕೋಟಿ ನೀಡಬೇಕಾಗುತ್ತದೆ. ಮುಖ್ಯಮಂತ್ರಿಗಳು 326 ಕೋಟಿ ನೀಡಿದ್ದು, ಸಿಬ್ಬಂದಿಯ 2 ತಿಂಗಳ ವೇತನ ನೀಡಲಾಗಿದೆ. ಸಿಬ್ಬಂದಿಗೆ ವೇತನ ರಹಿತ ರಜೆಯನ್ನು ಪಡೆಯುವಂತೆ ಒತ್ತಾಯ ಹಾಕುತ್ತಿಲ್ಲ. ಯಾವುದೇ ಕಾರಣಕ್ಕೂ ಸಿಬ್ಬಂದಿಯ ವೇತನವನ್ನು ಸರಕಾರ ತಡೆ ಹಿಡಿಯಲ್ಲ ಎಂದು ಸವದಿ ಅವರು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಅಭಯ ನೀಡಿದರು.