Take a fresh look at your lifestyle.

ಕರ್ನಾಟಕ ರಾಜ್ಯ ಅಂಗನವಾಡಿ‌ ಕಾರ್ಯಕರ್ತೆಯರ ಮಹಾಮಂಡಳದ ಅಧ್ಯಕ್ಷರಾದ ಜಿ.ಆರ್. ಶಿವಶಂಕರ್ ರವರು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕಾರಣವಾದ ಏಳು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮುಂದಿಟ್ಟು ಬೆಂಬಲವನ್ನು ನೀಡಲು ಸೂಚನೆ

0
post ad

ಬೆಂಗಳೂರು : ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿಗಳ ವಿರುದ್ದ ನವೆಂಬರ್ 26 ರಂದು ಕೇಂದ್ರ ಕಾರ್ಮಿಕ ಸಂಘಟನೆಗಳಜಂಟಿ ಸಮಿತಿ ಕರೆ ನೀಡಿರುವ ರಾಷ್ಷ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ‌ ಕಾರ್ಯಕರ್ತೆಯರ ಮಹಾಮಂಡಳಿಯ ಅಧ್ಯಕ್ಷರಾದ ಜಿ.ಆರ್. ಶಿವಶಂಕರ್ ರವರು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕಾರಣವಾದ ಏಳು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮುಂದಿಟ್ಟಿದ್ದು, ಮುಷ್ಕರದಲ್ಲಿ ಭಾಗವಹಿಸಿ ಬೆಂಬಲವನ್ನು ನೀಡಲು ಸೂಚಿಸಿದ್ದಾರೆ.

* ಕಾರ್ಮಿಕ ವಿರೋಧಿಯಾಗಿ ಸರ್ಕಾರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಾಗೂ ರೈತ ವಿರೋಧಿ  ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು. ಇದೇ ರೀತಿ ರಾಜ್ಯ ಸರ್ಕಾರ ಮತ್ತೆ ಹೊರಡಿಸಿರುವ ಸುಗ್ರೀವಾಜ್ಞೆ ವಾಪಸ್ಸಾಗಬೇಕು.
* ಶಿಕ್ಷಣ, ಆರೋಗ್ಯ, ರೈಲ್ವೆ, ರಸ್ತೆ, ವಿದ್ಯುತ್‌,‌ ದೂರಸಂಪರ್ಕ, ವಿಮಾ, ಬ್ಯಾಂಕ್‌ ಮುಂತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು ಹಾಗೂ ಆರ್ಡಿನೆನ್ಸ್‌ ಕಾರ್ಖಾನೆಗಳು, ಬಂದರುಗಳು ಮುಂತಾದ ಸರ್ಕಾರಿ ಉತ್ಪಾದನಾ ಮತ್ತು ಸೇವಾ ಸಂಸ್ಥೆಗಳ ಸಾಂಸ್ಥೀಕರಣ ನಿಲ್ಲಿಸಬೇಕು.
* ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ 7,500 ರೂಗಳ ನೆರವನ್ನು ಆರು ತಿಂಗಳ ಕಾಲ ನೀಡಬೇಕು. ಎಲ್ಲಾ ಕುಟುಂಬಗಳ ಪ್ರತಿ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ. ಆಹಾರ ಪದಾರ್ಥಗಳನ್ನು ನೀಡಬೇಕು.
* ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕೇಳುವ ಎಲ್ಲರಿಗೂ ಮಹಾತ್ಮ ಗಾಂಧಿ ರಾಷ್ಟೀಯ
ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 200 ದಿನಗಳ ಉದ್ಯೋಗ ನೀಡಬೇಕು.
* ನಗರ ಪ್ರದೇಶಗಳಲ್ಲಿ ಉದ್ಯೋಗ ಖಾತರಿಯನ್ನು ವಿಸ್ತರಿಸಬೇಕು. ಕೂಲಿಯನ್ನು ಕನಿಷ್ಟ 600 ರೂಗಳಿಗೆ ಹೆಚ್ಚಿಸಬೇಕು.
* ಸರ್ಕಾರಿ ಮತ್ತು ಸಾರ್ವಜನಿಕ ರಂಗದ ಘಟಕಗಳ ನೌಕರರ ಒತ್ತಾಯದ ಅಕಾಲಿಕ ನಿವೃತ್ತಿಯ ಸುತ್ತೋಲೆಯನ್ನು ಹಿಂತೆಗೆದುಕೊಳ್ಳಬೇಕು.
* ಎಲ್ಲಾ ಕಾರ್ಮಿಕರಿಗೆ ಪಿಂಚಣಿ ಒದಗಿಸಬೇಕು. ಎನ್‌ಪಿಎಸ್‌ ನ್ನು ರದ್ದು ಮಾಡಿ ಹಿಂದಿನ ಪಿಂಚಣಿ ಯೋಜನೆಯನ್ನು ಪುನರ್‌ ಸ್ಥಾಪಿಸಬೇಕು ಹಾಗೂ EPS-95 ನ್ನು ಸುಧಾರಿಸಬೇಕು.
* ರೂ.21,000/- ಸಮಾನ ಕನಿಷ್ಟ ವೇತನ ನಿಗದಿ ಮಾಡಬೇಕು, ಕಾರ್ಮಿಕ ಸಂಘದ ಕಡ್ಡಾಯ ಮಾನ್ಯತೆಗೆ ಶಾಸನ ರೂಪಿಸಬೇಕು, ಗುತ್ತಿಗೆ ಕಾರ್ಮಿಕರ ಖಾಯಂಗೆ ಅಸ್ಸಾಂ ಮತ್ತು ತಮಿಳುನಾಡು ಮಾದರಿಯಲ್ಲಿ ಶಾಸನ ರೂಪಿಸಬೇಕು ಹಾಗೂ ಅಸಂಘಟಿತ ಕಾರ್ಮಿಕರಿಗೆ ಭವಿಷ್ಯನಿಧಿಗೆ ಶಾಸನ ರೂಪಿಸಿ ಜಾರಿಮಾಡಬೇಕು ಎಂಬ ಏಳು ಬೇಡಿಕೆಗಳನ್ನು ಕಾರ್ಯಕರ್ತೆಯರ ಮುಂದೆ ಪ್ರಸ್ತಾಪಿಸಿದ್ದು, ನವಂಬರ್ 26 ರ ಮುಷ್ಕರವನ್ನು ಫಲಪ್ರದಗೊಳಿಸಬೇಕೆಂದು ಕರೆ ನೀಡಿದ್ದಾರೆ.