Take a fresh look at your lifestyle.

ಟೊಯೋಟಾ ಕಾರ್ಮಿಕರ ಹೋರಾಟಕ್ಕೆ ಸಿದ್ದರಾಮಯ್ಯ ಬೆಂಬಲ

ನಾಳೆಯ ವಿಧಾನಸಭೆಯಲ್ಲಿ ಟೊಯೋಟಾ ಕಾರ್ಮಿಕರ ವಿಚಾರವನ್ನು ಪ್ರಸ್ತಾಪ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರಿ ನಿಮ್ಮ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.

0
post ad

ಬಿಡದಿ : ಟೊಯೋಟಾ ಕಾರ್ಮಿಕರ ಹೋರಾಟಕ್ಕೆ ಬೆಂಬಲ ನೀಡಲು ಮಾಜಿ ಮುಖ್ಯಮಂತ್ರಿ  ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರೂ ಆಗಮಿಸಿ ಸಂಪೂರ್ಣ ಬೆಂಬಲ ಸೂಚಿಸಿದರು.
ಟಿಕೆಎಂ ಆಡಳಿತ ಮಂಡಳಿಯ ಅವೈಜ್ಞಾನಿಕ ಕೆಲಸದ ವಿಧಾನ, ಸನ್ನಡತೆ ಪತ್ರಕ್ಕೆ ಸಹಿ ಷರತ್ತು ವಿಧಿಸಿ ಲಾಕ್ ಔಟ್ ತೆರವು ಗೊಳಿಸಿರುವುದು ಸೇರಿದಂತೆ ಕಾರ್ಮಿಕರ ಕೂಗಿನ ಕಡೆ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಟೊಯೋಟಾ ಕಾರ್ಮಿಕರು ನಡೆಸುತ್ತಿರುವ ಹೋರಾಟ ದಿನೇ ದಿನೇ ವಿಭಿನ್ನ ಪ್ರತಿಭಟನೆಗಳಿಂದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.


ಯಾವುದೇ ಬಹುರಾಷ್ಟ್ರೀಯ ಕಂಪನಿಗಳು ಇಲ್ಲಿ ಬಂಡವಾಳ ಹೂಡಿಕೆ ಮಾಡಲು ಅವಕಾಶ ಇದೆ. ಆದರೆ ಅವರು ನಮ್ಮ ಜನಕ್ಕೆ ಉದ್ಯೋಗ ನೀಡಬೇಕು ಅದು ಬಿಟ್ಟು ಅಲ್ಲಿನ ಕಾನೂನು ಇಲ್ಲಿ ಪಾಲಿಸಲು ಸಾಧ್ಯವಿಲ್ಲ. ಇಲ್ಲಿ ತಮ್ಮದೇ ಆದ ಕಾನೂನು ಇವೆ ಅದಕ್ಕೆ ತಲೆಬಾಗಲೇಬೇಕು ಎಂದು ಎಚ್ಚರಿಸಿದರು.
ನಾಳೆಯ ವಿಧಾನಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರಿ ನಿಮ್ಮ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.

720p
ದೇಶದ ಕಾನೂನುಗಳನ್ನು ಗಾಳಿಗೆ ತೂರಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿಯ ಆಡಳಿತ ವರ್ಗದ  ವಿರುದ್ಧ ಸ್ವಾಭಿಮಾನಿ ಕಾರ್ಮಿಕರು ನಡೆಸುತ್ತಿರುವ ಹೋರಾಟವು 84 ನೇ ದಿನಕ್ಕೆ ಕಾಲಿಟ್ಟಿದೆ.
ಈ ವೇಳೆ, ಎಂ.ಲ್.ಸಿ.ಲಿಂಗಪ್ಪ, ಎಂ.ಲ್.ಸಿ.ರವಿ, ಮಾಜಿ ಶಾಸಕ ಲಿಂಗಪ್ಪ, ಮಾಜಿ ಶಾಸಕ ಬಾಲಕೃಷ್ಣ ಹಾಗೂ ಇತರರು ಹಾಜರಿದ್ದರು.
ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಲಿ. ಕಂಪನಿಯಲ್ಲಿ ಕಾರ್ಮಿಕ ಸಂಘದ ಒಬ್ಬ ಪದಾಧಿಕಾರಿ ಅಮಾನತ್ತಿನಿಂದ ಆರಂಭವಾದ ಬಿಕ್ಕಟ್ಟು 66 ಕಾರ್ಮಿಕರ ಅಮಾನತ್ತು,  84 ದಿನಗಳ ಪ್ರತಿಭಟನೆಗೆ ಕಾರಣವಾಗಿದೆ.
ರಾಜ್ಯದ ಹಲವು ಕಾರ್ಮಿಕ, ದಲಿತ, ರೈತ ಸಂಘಟನೆಗಳು ಸೇರಿದಂತೆ ವಿರೋಧ ಪಕ್ಷಗಳು ಟೊಯೋಟಾ ಕಾರ್ಮಿಕರ ಪರವಾಗಿ ನಿಂತು ಬೆಂಬಲ ಸೂಚಿಸುತ್ತಿವೆ.