Take a fresh look at your lifestyle.

ಡಯಾಲಿಸಿಸ್‌ಗಾಗಿ ವಿಶೇಷ ಸಾಂದರ್ಭಿಕ ರಜೆ ಮಂಜೂರು

ಡಯಾಲಿಸಿಸ್‌ಗೆ ಒಳಪಡುವ ದಿನದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿತ್ತು

0
post ad

ಬೆಂಗಳೂರು : ಕಿಡ್ನಿ ವೈಫಲ್ಯಕ್ಕೆ ತುತ್ತಾಗುವ ರಾಜ್ಯ ಸರ್ಕಾರಿ ನೌಕರರು ಡಯಾಲಿಸಿಸ್‌ಗೆ ಒಳಪಡುವ ದಿನದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿ ಸಕಾರಾತ್ಮಕ ನಿರ್ಣಯ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ  ಅಭಿನಂದನೆಗಳನ್ನು ಸಲ್ಲಿಸಿದರು.
ಕಿಡ್ನಿ ವೈಫಲ್ಯದಿಂದ ಡಯಾಲಿಸಿಸ್‌ಗೆ ಒಳಪಡುವ ರಾಜ್ಯ ಸರ್ಕಾರಿ ನೌಕರರು ಅಧಿಕೃತ ವೈದ್ಯಕೀಯ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸುವ ಷರತ್ತಿನೊಂದಿಗೆ ಡಯಾಲಿಸಿಸ್‌ಗೆ ಒಳಪಡುವ ದಿನದಂದು ವಿಶೇಷ ಸಾಂದರ್ಭಿಕ ರಜೆಯನ್ನು ಪಡೆಯಬಹುದಾಗಿರುತ್ತದೆ. ಇದರ ಸದುಪಯೋಗವನ್ನು  ಸರ್ಕಾರಿ ನೌಕರರುಗಳು ಪಡೆದುಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಜಿಲ್ಲಾ ಘಟಕಗಳು ಮನವಿ ಮಾಡಿಕೊಂಡಿವೆ.