Take a fresh look at your lifestyle.

ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆ

15,000 ಕ್ಕಿಂತ ಕಡಿಮೆ ವೇತನ ಪಡೆಯುವ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷ ಶೈಕ್ಷಣಿಕ ಪ್ರೋತ್ಸಾಹ ಧನವನ್ನು ಬೋರ್ಡ್ ನೀಡುತ್ತದೆ.. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕ

0
post ad

ಬೆಂಗಳೂರು : ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆ ನಡೆಯಿತು.
ಮಂಡಳಿಯ 90 ನೇ ಸಭೆಯಲ್ಲಿ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ರಾಜ್ಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಜಾರಿಗೆ ತರಬಹುದಾದಂತಹ ಯೋಜನೆ ಮತ್ತು ಸೌಲಭ್ಯಗಳನ್ನು ಕುರಿತು ಚರ್ಚಿಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ಕಾರ್ಮಿಕ ಸಚಿವರು ನೀಡಿದರು.
ಈ ಸಭೆಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯ ಆಯುಕ್ತರು, ಕಾರ್ಮಿಕ ಇಲಾಖೆ ಆಯುಕ್ತರು, ಕಾರ್ಮಿಕ ಮುಖಂಡರು, ಮಂಡಳಿ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣವನ್ನು ಸಂವರ್ಧನೆ ಗೊಳಿಸುವುದಕ್ಕೆ ಹಣಕಾಸು ಒದಗಿಸಲು ಮತ್ತು ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಒಂದು ನಿಧಿಯನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ಅಧಿನಿಯಮ 1965 ರ ಅಡಿಯಲ್ಲಿ ಸ್ಥಾಪಿಸಲಾಗಿದೆ.
ಕರ್ನಾಟಕ ಕಾರ್ಮಿಕ ಕಲ್ಕಾಣ ನಿಧಿ ಕಾಯ್ದೆ 1965ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾರ್ಖಾನೆಗಳು, ಪ್ಲಾಂಟೀಶನ್‌ಗಳು, ಮೋಟಾರು ವಾಹನ ಸಂಸ್ಥೆಗಳು ಮತ್ತು 50 ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಚಾರಿಟಬಲ್‌ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು
ಕಡ್ಡಾಯವಾಗಿ ವಂತಿಕೆ ಪಾವತಿಸಬೇಕಾಗಿರುತ್ತದೆ. ಸರ್ಕಾರದ 06.04.2017 ರ ಅಧಿಸೂಚನೆಯಂತೆ ಕಾರ್ಮಿಕರು ರೂ.20 ಮಾಲೀಕರು ರೂ.40 ರಂತೆ ಒಟ್ಟು ರೂ 60 ರಂತೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಅಧಿನಿಯಮ 7ಎ ಪ್ರಕಾರ ಫಾರಂ “ಡಿ’ ನಮೂನೆಯೊಂದಿಗೆ ವಂತಿಗೆ ಪಾವತಿಸುವುದು ಕಡ್ಡಾಯವಾಗಿದೆ.
ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯು ಕಾರ್ಮಿಕರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತದೆ. 15,000 ಕ್ಕಿಂತ ಕಡಿಮೆ ವೇತನ ಪಡೆಯುವ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷ ಶೈಕ್ಷಣಿಕ ಪ್ರೋತ್ಸಾಹ ಧನ ನೀಡುವ ಯೋಜನೆ ಪ್ರಮುಖವಾಗಿದೆ.

ಈ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕವಾಗಿದೆ. 

ಕಾರ್ಮಿಕರಿಗೆ ಈ ಮಂಡಳಿಯ ಬಗೆಗೆ ಹೆಚ್ಚು ಮಾಹಿತಿ ಇಲ್ಲದಿರುವುದರಿಂದ ಮಂಡಳಿ ಅಥವಾ ಬೋರ್ಡ್ ಈ ಬಗೆಗೆ ಹೆಚ್ಚು ಪ್ರಚಾರ ಮಾಡುವ ಅಗತ್ಯವಿದೆ.