Take a fresh look at your lifestyle.

ಟೊಯೋಟಾ ಕಾರ್ಮಿಕರಿಂದ ಬೃಹತ್ ಪಾದಯಾತ್ರೆ, ಅಂತಿಮ ಗಡುವು

ಬೃಹತ್ ಪಾದಯಾತ್ರೆಯ ನಂತರ ಸ್ಥಳೀಯ ಜನಪ್ರತಿನಿಧಿಗಳು ಟೊಯೋಟಾ ಆಡಳಿತ ಮಂಡಳಿಗೆ ಬಿಕ್ಕಟ್ಟು ಪರಿಹಾರಕ್ಕೆ ಎಂಟು ದಿನಗಳ ಗಡುವು ನೀಡಿದರು.

0
post ad

ಬಿಡದಿ : ಅವೈಜ್ಞಾನಿಕ ಕೆಲಸದ ಮಾದರಿಗಳನ್ನು ಅಳವಡಿಸಿಕೊಂಡು ದೇಶದ ಕಾನೂನುಗಳನ್ನು ಗಾಳಿಗೆ ತೂರಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿಯ ಆಡಳಿತ ವರ್ಗದ ವಿರುದ್ಧ ಸ್ವಾಭಿಮಾನಿ ಕಾರ್ಮಿಕರು ನಡೆಸುತ್ತಿರುವ ಹೋರಾಟವು ಸ್ಥಳೀಯ ಜನ ಪ್ರತಿನಿಧಿಗಳು, ಸಂಘಟನೆಗಳ ಒಕ್ಕೊರಲಿನ ಬೆಂಬಲದೊಂದಿಗೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಟೊಯೋಟಾ ಆಡಳಿತ ಮಂಡಳಿಯ ಮನುಷ್ಯನ ಸಾಮರ್ಥ್ಯಕ್ಕೂ ಮೀರಿದ ಕೆಲಸದ ವಿಧಾನ, ಒತ್ತಡಗಳ ವಿರುದ್ಧ ಸಿಡಿದೆದ್ದ ಕಾರ್ಮಿಕ ಸಂಘದ ಹೋರಾಟದ ಭಾಗವಾಗಿ ಇಂದು ಕಾರ್ಮಿಕರು ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದರು.
ಬಿಡದಿಯ ಬಿಜಿಎಸ್ ವೃತ್ತದಲ್ಲಿ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಜೊತೆಗೆ ಜನಪ್ರತಿನಿಧಿಗಳ ಬೆಂಬಲದೊಂದಿಗೆ ಆರಂಭವಾದ ಟಿಕೆಎಂ ಕಾರ್ಮಿಕರು ಪಾದಯಾತ್ರೆಯು ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿಯವರೆಗೂ ನಡೆಯಿತು.
ಬೃಹತ್ ಪಾದಯಾತ್ರೆಯ ನಂತರ ಸ್ಥಳೀಯ ಜನಪ್ರತಿನಿಧಿಗಳು ಟೊಯೋಟಾ ಆಡಳಿತ ಮಂಡಳಿಗೆ ಬಿಕ್ಕಟ್ಟು ಪರಿಹಾರಕ್ಕೆ ಎಂಟು ದಿನಗಳ ಗಡುವು ನೀಡಿದರು.


ಅವೈಜ್ಞಾನಿಕ ಕೆಲಸದ ಮಾದರಿ, ಸರ್ಕಾರದ ಆದೇಶಗಳಿಗೆ ಮನ್ನಣೆ ನೀಡಿದ ಆಡಳಿತ ವರ್ಗ ಸನ್ನಡತೆ ಪತ್ರಕ್ಕೆ ಸಹಿ ಷರತ್ತು ವಿಧಿಸಿ ಲಾಕ್ ಔಟ್ ತೆರವು ಗೊಳಿಸಿರುವುದನ್ನು ವಿರೋಧಿಸಿ ಕಾರ್ಮಿಕ ಸಂಘ ನಡೆಸುತ್ತಿರುವ ಹೋರಾಟವು 81ನೇ ದಿನಕ್ಕೆ ಕಾಲಿಟ್ಟಿದೆ.
ಪಾದಯಾತ್ರೆಯಲ್ಲಿ ಸಂಸದ ಡಿ ಕೆ ಸುರೇಶ್, ಮಾಜಿ ಶಾಸಕ ಎಚ್ ಸಿ ಬಾಲಕೃಷ್ಣ, ಮಾಜಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಶಾಸಕ ನರೇಂದ್ರ ಸ್ವಾಮಿ, ಕಾಂಗ್ರೆಸ್ ಮುಖಂಡ ಗನಿಗ ರವಿ, ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಮುಂತಾದವರು ಭಾಗವಹಿಸಿದ್ದರು.
ಇನ್ನು, ಟಿಕೆಎಂ ಪಾದಯಾತ್ರೆಗೆ ಕಾರ್ಮಿಕರ ಕುಟುಂಬ ಸದಸ್ಯರು ಜೊತೆಯಾದರು, ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಇತರೇ ಕಂಪನಿಗಳ ಕಾರ್ಮಿಕರು, ದಲಿತ, ಕನ್ನಡ ಪರ ಸಂಘಟನೆಗಳ ಸ್ಥಳೀಯ ಪದಾಧಿಕಾರಿಗಳು ಸಾಥ್ ನೀಡಿದ್ದರು.

ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಲಿ. ಕಂಪನಿಯಲ್ಲಿ ಕಾರ್ಮಿಕ ಸಂಘದ ಒಬ್ಬ ಪದಾಧಿಕಾರಿ ಅಮಾನತ್ತಿನಿಂದ ಆರಂಭವಾದ ಬಿಕ್ಕಟ್ಟು 66 ಕಾರ್ಮಿಕರ ಅಮಾನತ್ತು, 81 ದಿನಗಳ ಪ್ರತಿಭಟನೆಗೆ ಕಾರಣವಾಗಿದೆ.
ರಾಜ್ಯದ ಹಲವು ಕಾರ್ಮಿಕ, ದಲಿತ, ಸಂಘಟನೆಗಳು ಸೇರಿದಂತೆ ವಿರೋಧ ಪಕ್ಷಗಳು ಟೊಯೋಟಾ ಕಾರ್ಮಿಕರ ಪರವಾಗಿ ನಿಂತು ಬೆಂಬಲ ಸೂಚಿಸುತ್ತಿವೆ.