Take a fresh look at your lifestyle.

ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನ್ಯಾಯಕ್ಕಾಗಿ ಕಾರ್ಮಿಕರ ಆಗ್ರಹ

ನ್ಯಾಯದೇವತೆಯ ಪ್ರತೀಕವಾಗಿ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿ ಕೊಂಡು ನ್ಯಾಯಯುತ ಬೇಡಿಕೆಗೆ ಆಗ್ರಹಿಸಿ ಟಿಕೆಎಂ ಕಾರ್ಮಿಕರು ಕಾರ್ಖಾನೆಯ ಎದುರು ಪ್ರತಿಭಟನೆ ನಡೆಸಿದರು

0
post ad

ಬಿಡದಿ : ಅಮಾನವೀಯ ಕಾರ್ಯಾಚರಣೆ ಕಂಡು ಕಾಣದಂತೆ ವರ್ತಿಸುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಆಡಳಿತ ಮಂಡಳಿ ಮತ್ತು ಕಾರ್ಮಿಕರ ಸಮಸ್ಯೆಗಳ ಬಗೆಗೆ ಜಾಣ ಕುರುಡುತನ ಪ್ರದರ್ಶಿಸುತ್ತಿರುವ ಸರ್ಕಾರ, ಕಾರ್ಮಿಕ ಇಲಾಖೆಯ ನಡೆಯನ್ನು ಬಿಂಬಿಸುವ ಚಿತ್ರಣವನ್ನು ತೋರ್ಪಡಿಸುವ ನಿಟ್ಟಿನಲ್ಲಿ ಕಾರ್ಮಿಕರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸ್ವಾಭಿಮಾನದ ಹೋರಾಟವನ್ನು ಮುಂದುವರೆಸಿದ್ದಾರೆ.


ನ್ಯಾಯದೇವತೆಯ ಪ್ರತೀಕವಾಗಿ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿ ಕೊಂಡು ನ್ಯಾಯಯುತ ಬೇಡಿಕೆಗೆ ಆಗ್ರಹಿಸಿ ಟಿಕೆಎಂ ಕಾರ್ಮಿಕರು ಕಾರ್ಖಾನೆಯ ಎದುರು ಪ್ರತಿಭಟನೆ ನಡೆಸಿದರು.

https://youtu.be/wo5xOzNYh24

ಆಡಳಿತ ಮಂಡಳಿಯ ಕಾರ್ಮಿಕ ದಮನ ನೀತಿಗಳ ವಿರುದ್ಧ ಕಾರ್ಮಿಕರು ನಡೆಸುತ್ತಿರುವ ಸ್ವಾಭಿಮಾನಿ ಹೋರಾಟವು 58ನೇ ದಿನಕ್ಕೆ ಕಾಲಿಟ್ಟಿದೆ.
ಈ ನಡುವೆ ಟಿಕೆಎಂ ಕಾರ್ಮಿಕರಿಗೆ ದಕ್ಷಿಣ ಭಾರತದ ಕಾರು ಮತ್ತು ಟೈರ್ ತಯಾರಿಕಾ ಸಂಸ್ಥೆಗಳ ಕಾರ್ಮಿಕರು ಬೆಂಬಲ ಸೂಚಿಸಿದ್ದು, ನೆನ್ನೆ ತಮಿಳುನಾಡಿನ ಚೆನ್ನೈನ ಶ್ರೀ ಪೆರಂಬೂರಿನಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ.


ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಲಿ. ಕಂಪನಿಯಲ್ಲಿ ಕಾರ್ಮಿಕ ಸಂಘದ ಒಬ್ಬ ಪದಾಧಿಕಾರಿ ಅಮಾನತ್ತಿನಿಂದ ಆರಂಭವಾದ ಬಿಕ್ಕಟ್ಟು 65 ಕಾರ್ಮಿಕರ ಅಮಾನತ್ತು, 58 ದಿನಗಳ ಪ್ರತಿಭಟನೆಗೆ ಕಾರಣವಾಗಿದೆ.
ರಾಜ್ಯದ ಹಲವು ಕಾರ್ಮಿಕ, ದಲಿತ, ರೈತ ಸಂಘಟನೆಗಳು ಸೇರಿದಂತೆ ವಿರೋಧ ಪಕ್ಷಗಳು ಟೊಯೋಟಾ ಕಾರ್ಮಿಕರ ಪರವಾಗಿ ನಿಂತು ಬೆಂಬಲ ಸೂಚಿಸುತ್ತಿವೆ.