Take a fresh look at your lifestyle.

ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಕೈಗಾರಿಕಾ ಸಚಿವರಿಗೆ ಟಿಕೆಎಂಇಯು ಮನವಿ

ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ಟೊಯೋಟಾ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಟಿಕೆಎಂ ಕಾರ್ಮಿಕ ಸಂಘ ಮನವಿ ಮಾಡಿತು. ಈ ವೇಳೆ, ಶಾಸಕಿ ಅನಿತಾ ಕುಮಾರಸ್ವಾಮಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ರವರು ಉಪಸ್ಥಿತರಿದ್ದರು.

0
post ad

ರಾಮನಗರ : ಟಿಕೆಎಂ ಆಡಳಿತ ಮಂಡಳಿ ಸನ್ನಡತೆ ಪತ್ರಕ್ಕೆ ಸಹಿ ಷರತ್ತು ವಿಧಿಸಿ ಲಾಕ್ ಔಟ್ ತೆರವು ಗೊಳಿಸಿರುವುದು, ಅವೈಜ್ಞಾನಿಕ ಕೆಲಸದ ವಿಧಾನ, ಕಾರ್ಮಿಕರ ಕೂಗಿನ ಕಡೆ ನಿರ್ಲಕ್ಷ್ಯ ಧೋರಣೆಯನ್ನು ಅನುಸರಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಾ ಕಾರ್ಮಿಕರು ಮುಂದುವರೆಸಿರುವ ಹೋರಾಟದ ಭಾಗವಾಗಿ ಕಾರ್ಮಿಕ ಸಂಘ ಬೃಹತ್ ಕೈಗಾರಿಕಾ ಸಚಿವರನ್ನು ಬೇಟಿ ಮಾಡಿದ್ದರು.
ರಾಮನಗರದ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರಾಜ್ಯದ ಮೊದಲ ಪ್ರಿಂಟೆಕ್ ಪಾರ್ಕ್ ಕ್ಲಸ್ಟರ್ ಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು.

ಹಾರೋಹಳ್ಳಿಗೆ ತೆರಳಿದ ಟಿಕೆಎಂ ಕಾರ್ಮಿಕರ ನಿಯೋಗ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನೂ ಭೇಟಿ ಮಾಡಿ ಟೊಯೋಟಾ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಟಿಕೆಎಂ ಕಾರ್ಮಿಕ ಸಂಘ ಮನವಿ ಮಾಡಿತು. ಮನವಿ ಪತ್ರ ಸಲ್ಲಿಸುವಾಗ ಶಾಸಕಿ ಅನಿತಾ ಕುಮಾರ ಸ್ವಾಮಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ರವರು ಉಪಸ್ಥಿತರಿದ್ದರು.
ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಪ್ರಸನ್ನಕುಮಾರ್ ಚಕ್ಕರೆ, ಪದಾಧಿಕಾರಿಗಳ ಜೊತೆಗೂಡಿ ಮನವಿ ಪತ್ರವನ್ನು ಸಚಿವರಿಗೆ ನೀಡಿದರು.
ಟಿಕೆಎಂಇಯು ನಿಂದ ಮನವಿ ಪತ್ರ ಸ್ವೀಕರಿಸಿದ ಸಚಿವರು ಶೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಲಿ. ಕಂಪನಿಯಲ್ಲಿ ಕಾರ್ಮಿಕ ಸಂಘದ ಒಬ್ಬ ಪದಾಧಿಕಾರಿ ಅಮಾನತ್ತಿನಿಂದ ಆರಂಭವಾದ ಬಿಕ್ಕಟ್ಟು 66 ಕಾರ್ಮಿಕರ ಅಮಾನತ್ತು, 73 ದಿನಗಳ ಪ್ರತಿಭಟನೆಗೆ ಕಾರಣವಾಗಿದೆ.
ರಾಜ್ಯದ ಹಲವು ಕಾರ್ಮಿಕ, ದಲಿತ, ರೈತ ಸಂಘಟನೆಗಳು ಸೇರಿದಂತೆ ವಿರೋಧ ಪಕ್ಷಗಳು ಟೊಯೋಟಾ ಕಾರ್ಮಿಕರ ಪರವಾಗಿ ನಿಂತು ಬೆಂಬಲ ಸೂಚಿಸುತ್ತಿವೆ.
ಕಂಪನಿಯ ಆಡಳಿತ ಮಂಡಳಿ ಎರಡನೇ ಬಾರಿಗೆ ಷರತ್ತುಬದ್ಧ ಲಾಕ್ ಔಟ್ ತೆರವು ಮಾಡಿದೆ, ಅದು ಕಾರ್ಮಿಕರು ನಡುವಳಿಕೆ ಪತ್ರಕ್ಕೆ ಸಹಿ ಮಾಡಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ತಿಳಿಸಿದೆ. ಅದರೆ, ಕಾರ್ಮಿಕ ಸಂಘ ಈ ಷರತ್ತನ್ನು ಖಂಡಿಸಿ ತಮ್ಮ ಸ್ವಾಭಿಮಾನದ ಹೋರಾಟವನ್ನು ಮುಂದುವರೆಸಿದ್ದಾರೆ.