Take a fresh look at your lifestyle.

ಬೆಮೆಲ್ ಖಾಸಗೀಕರಣ ವಿರೋಧಿಸಿ ಟ್ರಾಕ್ಟರ್ ರ‌್ಯಾಲಿ

ಬಂಗಾರಪೇಟೆಯಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಂಬೇಡ್ಕರ್ ಪ್ರತಿಮೆಯ ಮುಂಭಾಗದಿಂದ ರೈಲ್ವೆ ನಿಲ್ದಾಣದವರೆಗೂ ಟ್ರಾಕ್ಟರ್ ಜಾಥಾವನ್ನು ನಡೆಸಲಾಯಿತು

0
post ad

ಬಂಗಾರ ಪೇಟೆ : ಲಕ್ಷಾಂತರ ಕಾರ್ಮಿಕರ ಜೀವನಾಡಿಯಾಗಿರುವ ಬೆಮೆಲ್ (BEML) ನ್ನು ಖಾಸಗೀಕರಣ ಮಾಡುತ್ತಿರುವುದು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಕ್ರಮಗಳನ್ನು ವಿರೋಧಿಸಿ ಬಂಗಾರಪೇಟೆಯಲ್ಲಿ ಟ್ರಾಕ್ಟರ್ ರ‌್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

ಲಾಭದಾಯಕ ಸಾರ್ವಜನಿಕ ಉದ್ಯಮವಾದ ಬಿಇಎಂಎಲ್ ಅನ್ನು ಖಾಸಗೀಕರಣ ಮಾಡದಂತೆ ಹಾಗೂ ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡಿಸೇಲ್ ,ಅಡಿಗೆ ಅನಿಲದ ಬೆಲೆಗೆ ಕಡಿವಾಣ ಹಾಕಿ ಜನಸಾಮಾನ್ಯರು ಮತ್ತು ಕಾರ್ಮಿಕರ ರಕ್ಷಣೆಗೆ ನಿಲ್ಲಬೇಕು ಜೊತೆಗೆ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆದು ದೆಹಲಿ ಚಲೋ ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಗಳನ್ನು ಒತ್ತಾಯಿಸಿ ರೈತ ಸಂಘದಿಂದ ಈ ಟ್ರಾಕ್ಟರ್ ರ‌್ಯಾಲಿ ನಡೆಯಿತು.
ಇಂದು ಬೆಳಿಗ್ಗೆ 11ಗಂಟೆಗೆ ಬಂಗಾರಪೇಟೆಯಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಂಬೇಡ್ಕರ್ ಪ್ರತಿಮೆಯ ಮುಂಭಾಗದಿಂದ ರೈಲ್ವೆ ನಿಲ್ದಾಣದವರೆಗೂ ಟ್ರಾಕ್ಟರ್ ಜಾಥಾವನ್ನು ನಡೆಸಲಾಯಿತು.
ನಳಿನಿ ಗೌಡ ಮತ್ತು ಜಿಲ್ಲಾ ರೈತ ಮುಖಂಡರ ನೇತೃತ್ವದಲ್ಲಿ ಈ ಟ್ರಾಕ್ಟರ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದಲ್ಲಿ ಮೂವತ್ತಕ್ಕೂ ಹೆಚ್ಚು ಟ್ರಾಕ್ಟರ್ ಗಳ ಜೊತೆ ರೈತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.