Take a fresh look at your lifestyle.

ಬಿಇಎಂಎಲ್ ಖಾಸಗೀಕರಣವನ್ನು ಸದನದಲ್ಲಿ ಪ್ರಸ್ತಾಪಿಸುತ್ತೇವೆ ಎಂದ ಹ್ಯಾರೀಸ್

ಕಳೆದ ಹಲವಾರು ವರ್ಷಗಳಿಂದ ಈ ಖಾಸಗೀಕರಣದ ವಿರುದ್ದ ನೌಕರರು ಪ್ರತಿಭಟನೆ ನಡೆಸುತ್ತಾ ಬಂದಿದ್ದೀರಿ. ಮುಂಬರುವ ಅಧಿವೇಶನದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಇದರ ವಿರುದ್ದ ಧ್ವನಿ ಎತ್ತುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆಯುವ ಭರವಸೆಯನ್ನು ನೀಡಿದರು

0
post ad

ಬೆಂಗಳೂರು : ಬಿಇಎಂಎಲ್ ಸಂಸ್ಥೆಯ ಮುಂಭಾಗ ಖಾಸಗೀಕರಣವನ್ನು ವಿರೋಧಿಸಿ ಕಾರ್ಮಿಕ ಸಂಘ ಆಯೋಜಿಸಿದ್ದ ದ್ವಾರ ಪ್ರತಿಭಟನೆಯ ಸಭೆಯಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್. ಎ. ಹ್ಯಾರಿಸ್ ಭಾಗವಹಿಸಿದ್ದರು.
ಈ ವೇಳೆ ಕಾರ್ಮಿಕರನ್ನು ಉದ್ದೇಶಿಸಿ ಶಾಸಕರು ಮಾತನಾಡುತ್ತಾ, ಬೆಂಗಳೂರಿಗೆ ಖ್ಯಾತಿ ತಂದಿರುವ ಹಾಗೂ ಲಾಭದಾಯಕ ಸಾರ್ವಜನಿಕ ಉದ್ಯಮವಾಗಿರುವ ಬಿಇಎಂಎಲ್‌ ಖಾಸಗೀಕರಣವನ್ನು ವಿರೋಧಿಸಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಹೇಳಿದರು.
ಬೆಂಗಳೂರಿನ ಬಿಇಎಂಎಲ್‌ ಕಾಂಪ್ಲೆಕ್ಸ್ ಎದುರು ನಡೆದ ಗೇಟ್‌ ಮೀಟಿಂಗ್ ನಲ್ಲಿ ಭಾಗಿಯಾಗಿ ಖಾಸಗೀಕರಣ ವಿರೋಧಕ್ಕೆ ಬೆಂಬಲವನ್ನು ಸೂಚಿಸಿ ಮಾತನಾಡಿದ ಅವರು ದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆ ಆಗುತ್ತಿವೆ. ಇರುವ ಉದ್ಯೋಗಗಳನ್ನು ಉಳಿಸಿಕೊಂಡು ಜೀವನ ನಿರ್ವಹಿಸಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ದಿನೇ ದಿನೇ ಹೆಚ್ಚುತ್ತಿರುವ ಬೆಲೆಗಳು ಜನರ ಜೀವನವನ್ನು ದುಸ್ತರಗೊಳಿಸುತ್ತಿವೆ. ರಾಜ್ಯದ ಸುಮಾರು 10 ಸಾವಿರ ಜನರಿಗೆ ಉದ್ಯೋಗ ನೀಡಿರುವ ಹಾಗೂ ದೇಶದ ಪ್ರಮುಖ ಸಾರ್ವಜನಿಕ ಉದ್ಯಮವಾಗಿರುವ ಬಿಇಎಂಎಲ್‌ ನ್ನು ಖಾಸಗೀಕರಣಗೊಳಿಸುವ ಹಿಂದೆ ಖಾಸಗಿ ಕಂಪನಿಗಳ ಲಾಬಿ ಎದ್ದು ಕಾಣುತ್ತಿದೆ. ಲಾಭದಲ್ಲಿರುವ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವುದರ ಮೂಲಕ ದೇಶವನ್ನು ಖಾಸಗಿ ಕಂಪನಿಗಳ ಪಾಲು ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿ.ಇ.ಎಂ.ಎಲ್‌ ಕಾರ್ಮಿಕ ಸಂಘದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಆರ್‌ ನಾರಾಯಣ ಸೇರಿದಂತೆ ಸಾವಿರಾರು ಕಾರ್ಮಿಕರು ಪಾಲ್ಗೊಂಡಿದ್ದರು.
ಈ ವೇಳೆ ಬಿಇಎಂಎಲ್ ಕಾರ್ಮಿಕ ಸಂಘದ ಪದಾಧಿಕಾರಿಗಳು ಶಾಸಕರಿಗೆ ಬಿಇಎಂಎಲ್ ಸಂಸ್ಥೆಯನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ವಿಧಾನಸಭೆಯಲ್ಲಿ ಧ್ವನಿಗೂಡಿಸಿ ಬಿಇಎಂಎಲ್ ಸಂಸ್ಥೆಯನ್ನು ಉಳಿಸಬೇಕೆಂದು ಮನವಿ ಮಾಡಿದರು.