Take a fresh look at your lifestyle.

ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರ ದಾಳಿ, ಕೊಠಡಿಗೆ ಬೆಂಕಿ

ಹಲವು ತಿಂಗಳುಗಳಿಂದ ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಕಾರ್ಮಿಕರು ಇಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ರೊಚ್ಚಿಗೆದ್ದ ಸಿಬ್ಬಂದಿಯಿಂದ ಕಚೇರಿ ಮೇಲೆ ದಾಳಿ

0
post ad

ಕೋಲಾರ : ನೌಕರರಿಗೆ ನಾಲ್ಕು ತಿಂಗಳ ವೇತನ ನೀಡದಿರುವ ಆರೋಪದ ಹಿನ್ನಲೆಯಲ್ಲಿ ಕಾರ್ಮಿಕರು ಕಂಪನಿಯೊಳಗಿನ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕಚೇರಿಯ ಒಂದು ಕೊಠಡಿಗೆ ಬೆಂಕಿ ಹೊತ್ತಿಕೊಂಡಿದೆ.

ಕೋಲಾರದ ಪ್ರತಿಷ್ಟಿತ ಐಪೋನ್ ಬಿಡಿಭಾಗಗಳ ಕಂಪನಿಯಲ್ಲಿನ ಕಚೇರಿಯ ಗಾಜುಗಳನ್ನು ಪುಡಿ ಪುಡಿ ಮಾಡಿದ್ದು, ಕಾರುಗಳನ್ನು ಧ್ವಂಸ ಮಾಡಿದ್ದಾರೆ.
ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿಯಲ್ಲಿ ಕಳೆದ ಹಲವು ತಿಂಗಳಿಂದ ಕಾರ್ಮಿಕರಿಗೆ ವೇತನ ನೀಡಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಕಾರ್ಮಿಕರು ಇಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದರು. ಪ್ರತಿಭಟನೆ ವೇಳೆ ರೊಚ್ಚಿಗೆದ್ದ ಕಾರ್ಮಿಕರಿಂದ ಕಂಪನಿಯ ಮೇಲೆ ದಾಳಿ ನಡೆದಿದೆ.
ಹೆಚ್ಚು ಕೆಲಸ ಮಾಡಿಸಿಕೊಂಡು ಕಡಿಮೆ ವೇತನ ನೀಡುತ್ತಿರುವ ಆರೋಪವೂ ಆಡಳಿತ ಮಂಡಳಿಯ ವಿರುದ್ಧ ಕೇಳಿ ಬಂದಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,
ಪೋಲಿಸರಿಂದ ಲಾಠಿ ಪ್ರಹಾರವೂ ನಡೆದಿದೆ.
ವಿಸ್ಟ್ರಾನ್ ಕಂಪೆನಿಯ ಕಚೇರಿಯ ಒಂದು ಕೊಠಡಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಾದ ಕೆಲವೇ ಹೊತ್ತಿನಲ್ಲಿ ಸ್ಥಳಕ್ಕೆ ಕೋಲಾರದ ಎಸ್ಪಿ ಕಾರ್ತಿಕ್ ರೆಡ್ಡಿ, ಅಧಿಕಾರಿಗಳೊಂದಿಗೆ ಆಗಮಿಸಿ, ಪರಿಶೀಲನೆ ನಡೆಸಿದರು. ಜೊತೆಗೆ, ಸ್ಥಳಕ್ಕೆ ಕೇಂದ್ರವಲಯ ಐಜಿ ಸೀಮಂತ್ ಕುಮಾರ್ ಸಿಂಗ್ ಆಗಮಿಸಿದ್ದು ಎಸ್ಪಿ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದು, ಕಂಪನಿಯನ್ನು ಪರಿಶೀಲನೆ ನಡೆದಿದ್ದಾರೆ.